
ಚಿಕ್ಕಬಳ್ಳಾಪುರ ತಾಲೂಕಿನ ವರದಹಳ್ಳಿ ಗ್ರಾಮದಲ್ಲಿ ಹಕ್ಕಿ ಜ್ವರದ ಕಾರಣ ಕೋಳಿಗಳು ಸಾವನ್ನಪ್ಪಿದ್ದು, ಗ್ರಾಮಸ್ಥರು ಕೋಳಿ ಸೇವನೆ ಮತ್ತು ಸಾಗಾಣಿಕೆ ಮಾಡದಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಪಶು ಪಾಲನಾ ಇಲಾಖೆಯ ವೈದ್ಯರು ಇದೀಗ ವರದಿ ಸಲ್ಲಿಸಿದ್ದು, ವರದಿಯಲ್ಲಿ ಕೋಳಿಗಳ ಸಾವಿಗೆ ಹಕ್ಕಿ ಜ್ವರವೇ ಕಾರಣ ಎಂದು ದೃಢಪಟ್ಟಿದೆ.
ಆದ್ದರಿಂದ ಗ್ರಾಮದ ಒಂದು ಕಿಲೋಮೀಟರ್ ಸುತ್ತಲೂ ನಾಕಾ ಬಂಧಿ ಮಾಡುವಂತೆ ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಹಾಗೂ ಬರದ ಹಳ್ಳಿ ಗ್ರಾಮದಿಂದ ಕೋಳಿಗಳ ಸಾಗಾಣಿಕೆ ಸಂಪೂರ್ಣ ಬಂದ್ ಮಾಡಲಾಗಿದೆ.








































