
ಕಲಬುರಗಿ: ರಾಜ್ಯದ ಬಹುತೇಕ ಕಡೆ RSS ಪಥಸಂಚಲನಕ್ಕೆ ಅವಕಾಶ ಸಿಕ್ಕಿದ್ದರೂ ಚಿತ್ತಾಪುರದಲ್ಲಿ ಮಾತ್ರ ಅನುಮತಿ ಸಿಗದೇ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದು ಇದೀಗ ಕೊನೆಗೂ ಎರಡೆರಡು ಬಾರಿ ಶಾಂತಿ ಸಭೆ ಬಳಿಕ ಪಥ ಸಂಚಲನ ನಡೆಸಲು ಜಿಲ್ಲಾಡಳಿತ ಷರತ್ತುಬದ್ಧ ಸಮ್ಮತಿ ನೀಡಿದೆ.
ಗ್ರೀನ್ ಸಿಗ್ನಲ್ ದೊರೆತ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆ ಈ ಕುರಿತು ಪ್ರತಿಕ್ರಿಯಿಸಿದ್ದು, ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ ಎಂದು ಕಿಡಿಕಾರಿದ್ದಾರೆ.
ಸಂವಿಧಾನಕ್ಕೆ ತಲೆಬಾಗಿದರೆ ಮಾತ್ರ ಬದುಕು ಸುಂದರ. ಸಂವಿಧಾನಕ್ಕೆ ಸವಾಲು ಹಾಕಿದರೆ ಬದುಕು ದುಸ್ಥರ. ಆರ್ಎಸ್ಎಸ್ ಎಂಬ ಸಂಘಟನೆಗೆ ಈ ಸತ್ಯದ ಅರಿವಾಗಿದೆ ಎಂದು ಭಾವಿಸಿದ್ದೇನೆ. ಸಂವಿಧಾನ, ಕಾನೂನುಗಳು ನಮಗೆ ಅನ್ವಯಿಸುವುದಿಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದ RSS ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ ಎಂದಿದ್ದಾರೆ.
ಷರತ್ತುಗಳು:
- 300 ಜನರು ಮಾತ್ರ ಭಾಗವಹಿಸಬೇಕು.
- ಸರ್ಕಾರ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಅವಕಾಶ.
- ಚಿತ್ತಾಪುರದ ಹೊರಗಿನವರು ಭಾಗಿಯಾಗುವಂತಿಲ್ಲ.
- ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡುವಂತಿಲ್ಲ.
ಈ ನಿಯಮಗಳ ಮೂಲಕ ಸರ್ಕಾರ ತೋರಿದ ಉದಾರತೆಯನ್ನು, ಕಲಬುರಗಿ ಜಿಲ್ಲಾಡಳಿತ ತೋರಿದ ಸಹನೆಯನ್ನು ಗೌರವಿಸಿ RSS ತಮ್ಮ ಕಾರ್ಯಕ್ರಮವನ್ನು ಪೂರೈಸಿಕೊಳ್ಳಬೇಕು. ಜೈ ಸಂವಿಧಾನ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ತಿಳಿಸಿದ್ದಾರೆ.






















































