
ಹುಬ್ಬಳ್ಳಿ: ಬುಧವಾರ ಚಿತ್ರದುರ್ಗದ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಸಮೀಪದ ಆನೆಸಿದ್ರಿ ಕ್ರಾಸ್ ಬಳಿ ಸಂಭವಿಸಿದ ಬಸ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮಹಮ್ಮದ್ ರಫೀಕ್ ಎಂಬ ಸೀ ಬರ್ಡ್ ಬಸ್ ಚಾಲಕ ದುರಂತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು ಘಟನೆಯಲ್ಲಿ ಎರಡು ಕಾಲು, ಒಂದು ಕೈ ಮುರಿತಕ್ಕೊಳಗಾಗಿತ್ತು. ಕೂಡಲೇ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು ಗುರುವಾರ ರಾತ್ರಿ ಶಸ್ತ್ರಚಿಕಿತ್ಸೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ವರದಿಯಾಗಿದೆ.





