
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತದಲ್ಲಿ RCB ಯ 11 ಅಭಿಮಾನಿಗಳ ಸಾವನ್ನಪ್ಪಿದ್ದು ಈ ವಿಚಾರವಾಗಿ ಹೈಕಮಾಂಡ್ ಜೊತೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಈಗಾಗಲೇ ದೆಹಲಿಗೆ ತೆರಳಿದ್ದಾರೆ. ಇದೀಗ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ಸರ್ಕಾರದ ಪ್ರತಿಕ್ರಿಯೆ ಬಂದ ಬಳಿಕ ಮಧ್ಯಂತರ ಅರ್ಜಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಯಾವುದೇ ನಿರ್ದೇಶನ ನೀಡದೇ ಅರ್ಜಿಗಳ ವಿಚಾರಣೆಯನ್ನು ಜೂ.12 ಮಧ್ಯಾಹ್ನ 2.30ಕ್ಕೆ ಮುಂದೂಡಿದೆ.
ದುರಂತದ ಬಳಿಕ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ಹೈಕೋರ್ಟೇ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡಿದ್ದು ಹಲವರಿಂದ ಹೈಕೋರ್ಟ್ಗೆ ಮಧ್ಯಂತರ ಅರ್ಜಿ ವಿಚಾರಣೆಗೆ ಮನವಿ ಬಂದ ಹಿನ್ನೆಲೆ ನ್ಯಾ.ವಿ.ಕಾಮೇಶ್ವರ ರಾವ್ ಮತ್ತು ನ್ಯಾ.ಸಿ.ಎಂ.ಜೋಶಿ ಅವರ ಪೀಠದಿಂದ ಇಂದು ವಿಚಾರಣೆ ಮಾಡಿ ಸರ್ಕಾರದ ಪ್ರತಿಕ್ರಿಯೆ ಬಂದ ಬಳಿಕ ತೀರ್ಮಾನ ನೀಡುವುದಾಗಿ ಹೇಳಿ ಜೂ.12 ಮಧ್ಯಾಹ್ನ 2.30ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.



















