
ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವರು ಅಧಿಕಾರ ದುರುಪಯೋಗಪಡಿಸಿಕೊಂಡು ಚುನಾವಣಾ ಬಾಂಡ್ ಪಡೆದ ಆರೋಪದ ಮೇಲೆ ಇವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಆದರ್ಶ್ ಐಯ್ಯರ್ ಎಂಬವರು ನಿರ್ಮಲಾ ಸೀತಾರಾಮನ್ ಸೇರಿ ಹಲವರು ಚುನಾವಣಾ ಬಾಂಡ್ ಮೂಲಕ ಕೋಟ್ಯಂತರ ರೂ. ಹಣ ಸುಲಿಗೆ ಮಾಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದು ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್‌ಐಆರ್ ದಾಖಲಿಸಲು ಆದೇಶಿಸಿತ್ತು.
ಆದೇಶದ ಬೆನ್ನಲ್ಲೇ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.ಸೀತಾರಾಮನ್ ಅವರು ಎ1 ಆರೋಪಿಯಾಗಿದ್ದರೆ ಇಡಿ ಅಧಿಕಾರಿಗಳು ಎ2, ಕೇಂದ್ರ ಬಿಜೆಪಿ ಪದಾಧಿಕಾರಿಗಳು ಎ3, ನಳಿನ್ ಕುಮಾರ್ ಕಟೀಲ್ ಎ4, ಬಿ.ವೈ.ವಿಜಯೇಂದ್ರ ಎ5, ರಾಜ್ಯ ಬಿಜೆಪಿ ಪದಾಧಿಕಾರಿಗಳು ಎ6 ಆರೋಪಿಗಳಾಗಿದ್ದಾರೆ.













