
ಬೆಂಗಳೂರು: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಸುಧಾಕರ್ ಒಂದೇ ಒಂದು ವೋಟು ಜಾಸ್ತಿ ಪಡೆದರೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಪ್ರದೀಪ್ ಈಶ್ವರ್ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಜಯ ನಮ್ಮದಾಗಲಿದೆ. ಸುಧಾಕರ್ ಅವರು ಒಂದೇ ಒಂದು ಮತ ಜಾಸ್ತಿ ಪಡೆಯಲಿ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಮಾತನಾಡುತ್ತಾ ಶಾಸಕ ಪ್ರದೀಪ್ ಈಶ್ವರ್ ಸವಾಲೆಸೆದಿದ್ದಾರೆ.