
ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆಶ್ರಯದಲ್ಲಿಶಿವಪುರ ಸರಕಾರಿ ಪ್ರೌಢ ಶಾಲೆಯಲ್ಲಿ ಆಯೋಜಿಸಿದ್ದ ಪ್ರೌಢ ಶಾಲಾ ವಿಭಾಗದ ತಾಲೂಕು ಮಟ್ಟದ ಪಂದ್ಯಕೂಟದಲ್ಲಿ ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆಯ ಆಂಗ್ಲ ಮಾಧ್ಯಮ ವಿಭಾಗದ ಹತ್ತನೆಯ ತರಗತಿಯ ವಿದ್ಯಾರ್ಥಿ ಜೀತ್ ನಾಯಕ್ ವಿಜೇತನಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.
ಈತನು ಜೋಡುರಸ್ತೆ ನಿವಾಸಿ ವೆಂಕಟೇಶ್ ನಾಯಕ್ ಹಾಗೂ ಐಶ್ವರಿ ದಂಪತಿಗಳ ಪುತ್ರ.
ಈತನ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ಶಿಕ್ಷಕೇತರ ಬಂಧುಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.






















































