
ಬೆಂಗಳೂರು: ದೇವರಾಜ ಅರಸು ಅವರು ಈವರೆಗಿನ ದೀರ್ಘಾವಧಿ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು ಇದೀಗ ಸಿಎಂ ಸಿದ್ದರಾಮಯ್ಯ ಅವರು ಜನವರಿ 7ರಂದು ಕರ್ನಾಟಕದ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ದೇವರಾಜ್ ಅರಸು ಅವರು ಎರಡು ಅವಧಿಗಳಲ್ಲಿ ಒಟ್ಟು 2792 ದಿನಗಳು ಅಥವಾ 7.6 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದು ಇದೀಗ ಸಿಎಂ ಸಿದ್ದರಾಮಯ್ಯ ಅವರು ಜನವರಿ 7ರಂದು ಅರಸು ಅವರ ದಾಖಲೆಯನ್ನು ಮುರಿಯಲಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಅವರ ಅಭಿಮಾನಿಗಳು ಹಾಗೂ ವಿವಿಧ ಸಂಘಟನೆಗಳು ಸಂಭ್ರಮಾಚರಣೆಗೆ ಸಿದ್ಧತೆ ನಡೆಸುತ್ತಿದ್ದು ಅಹಿಂದ ಗುಂಪೊಂದು ಜನವರಿ 6ರಂದು ಬೆಂಗಳೂರಿನಲ್ಲಿ ನಾಟಿ ಕೋಳಿ ಊಟವನ್ನು ಆಯೋಜಿಸುತ್ತಿದೆ ಎಂದು ತಿಳಿದು ಬಂದಿದೆ.





