
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಜಾತಿ ಸಮೀಕ್ಷೆಯಲ್ಲಿ ಭಾಗವಹಿಸಿದ ನಂತರ ತಮ್ಮ ಎಕ್ಸ್ ಖಾತೆಯಲ್ಲಿ ‘ನಾನು ಸಮೀಕ್ಷೆಯಲ್ಲಿ ಭಾಗವಹಿಸಿದ್ದೇನೆ. ಅಸಮಾನತೆ, ಬಡತನವನ್ನು ನಿವಾರಣೆ ಮಾಡಿ ಸಮಸಮಾಜ ನಿರ್ಮಾಣ ಮಾಡುವ ಉದ್ದೇಶದೊಂದಿಗೆ ನಮ್ಮ ಸರ್ಕಾರವು ಈ ಸಮೀಕ್ಷೆಯನ್ನು ಕೈಗೊಂಡಿದೆ. ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಅವರ ಮಾತುಗಳಿಗೆ ಕಿವಿಗೊಡಬೇಡಿ ಎಲ್ಲರೂ ತಪ್ಪದೇ ಭಾಗವಹಿಸುವಂತೆ ಪೋಸ್ಟ್ ಮೂಲಕ ಮನವಿ ಮಾಡಿದ್ದಾರೆ.
ಈ ಸಮೀಕ್ಷೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು, ಪ್ರಾಮಾಣಿಕವಾಗಿ ಮಾಹಿತಿ ನೀಡಬೇಕು. ಇದರಿಂದ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಜನರನ್ನು ಗುರುತಿಸಿ ಅವರಿಗೆ ಸೌಲಭ್ಯ ಕೊಡಲು ಸಾಧ್ಯವಾಗುತ್ತದೆ. ಕೆಲವರು ವೈಯಕ್ತಿಕ ಮಾಹಿತಿ ದುರುಪಯೋಗವಾಗುತ್ತದೆ ಎಂದು ಸಮೀಕ್ಷೆಗೆ ಹಿಂದೇಟು ಹಾಕುತ್ತಿದ್ದಾರೆ. ಆದರೆ ನಿಮ್ಮ ವೈಯಕ್ತಿಕ ಮಾಹಿತಿ ಯಾವುದೇ ಕಾರಣಕ್ಕೂ ದುರುಪಯೋಗ ಆಗುವುದಿಲ್ಲ ಎಂದು ಭರವಸೆ ನೀಡಿದ್ದಾರೆ.






























































































































