
ಬೆಳಗಾವಿ: ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜಿಎಸ್‌ಟಿ ಆದಾಯ ತೆರಿಗೆ ತುಂಬುವವರ ಗೃಹಲಕ್ಷ್ಮಿ ಯೋಜನೆ ಅರ್ಜಿಗಳನ್ನು ತಿರಸ್ಕಾರ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಈ ಹಿಂದೆಯೂ ಕೂಡ ಜಿಎಸ್‌ಟಿ, ಆದಾಯ ತೆರಿಗೆ ತುಂಬುವವರಿಗೆ ಬರಲ್ಲ ಅಂತಾ ಹೇಳಿದ್ದರೂ ಜಿಎಸ್‌ಟಿ ಇದ್ದವರೂ ನಮ್ಮ ಪೋರ್ಟಲ್ ಗೆ ಅರ್ಜಿ ಹಾಕಿದ್ದರು. ಅವುಗಳನ್ನ ನಾವು ತಿರಸ್ಕಾರ ಮಾಡಿದ್ದೇವೆ ಎಂದರು.
ಸುಮಾರು ಹದಿನೈದು ಸಾವಿರ ಅರ್ಜಿಗಳು ಬಂದಿದ್ದು ಜಿಎಸ್‌ಟಿ ಇರುವ ಕಾರಣಕ್ಕೆ ತತಕ್ಷಣ ಅರ್ಜಿ ತಿರಸ್ಕಾರ ಮಾಡಿದ್ದೇವೆ. 1ಕೋಟಿ 23ಲಕ್ಷ ಗೃಹಲಕ್ಷ್ಮಿ ಹಣ ಅಂತಾ ಹೇಳಿದ್ದು ಕವರ್ ಮಾಡಿದ್ದೇವೆ. ಇಡೀ ರಾಜ್ಯದಲ್ಲಿ ಶ್ರೀಮಂತರು, ಜಿಎಸ್‌ಟಿ ಇದ್ದವರು ಸೇರಿ ಒಟ್ಟು 1ಕೋಟಿ 58ಲಕ್ಷ ಕುಟುಂಬಗಳಿವೆ. ಇಂದಿಗೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಬಹುದು. ಜುಲೈ ಮತ್ತು ಆಗಷ್ಟ್ ತಿಂಗಳ ಗೃಹಲಕ್ಷ್ಮಿ ಹಣದ ಕುರಿತು ಸಿಎಂ ಜೊತೆಗೆ ನಿನ್ನೆ ಚರ್ಚೆ ಮಾಡಿದ್ದು ಇನ್ನೊಂದು ವಾರದಲ್ಲಿ ಎರಡು ತಿಂಗಳ ಹಣ ಕೂಡ ಜಮಾ ಆಗಲಿದೆ ಎಂದು ತಿಳಿಸಿದರು.













