
ಬೆಂಗಳೂರು: ಶುಕ್ರವಾರ ಕರ್ನಾಟಕ ಆರೋಗ್ಯ ಇಲಾಖೆಯು ಮಹತ್ವದ ಆದೇಶವನ್ನು ಹೊರಡಿಸಿದ್ದು ಅದೇನೆಂದರೆ ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದು, ಚೇತರಿಕೆಯೇ ಕಾಣದೆ ಜೀವನಪೂರ್ತಿ ಸಂಕಷ್ಟ ಅನುಭವಿಸುವ ಸ್ಥಿತಿಯಲ್ಲಿರುವವರಿಗೆ ದಯಾಮರಣಕ್ಕೆ ಅವಕಾಶ ನೀಡಿ ಆದೇಶ ಹೊರಡಿಸಿದೆ. ವೈದ್ಯರ ತಂಡವು ಗಂಭೀರವಾದ ಮತ್ತು ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿರುವವರ ಕುಟುಂಬಸ್ಥರ ಮನವಿ ಮೇರೆಗೆ ಕಾರ್ಯ ನಿರ್ವಹಿಸಬೇಕು.
ಇದಕ್ಕಾಗಿ ಎರಡು ಪ್ರೈಮರಿ ಹಾಗೂ ಸೆಕೆಂಡರಿ ಎಂಬ ಎರಡು ವೈದ್ಯರ ಬೋರ್ಡ್ಗಳನ್ನು ಸ್ಥಾಪಿಸಲಾಗುತ್ತಿದೆ. ಪ್ರೈಮರಿ ಬೋರ್ಡ್ನಲ್ಲಿ ಮೂವರು ವೈದ್ಯರು ಇರುತ್ತಾರೆ. ಸೆಕೆಂಡರಿ ಬೋರ್ಡ್ನಲ್ಲಿ ಕೂಡ ಮೂವರು ವೈದ್ಯರು ಇರಲಿದ್ದಾರೆ. ಈ ಪೈಕಿ ಒಬ್ಬರು ಸರ್ಕಾರಿ ವೈದ್ಯರು ಇರುತ್ತಾರೆ. ಮೊದಲು ಪ್ರೈಮರಿ ಬೋರ್ಡ್ ರೋಗಿಯ ಕುಟುಂಬಸ್ಥರು ಮಾಡಿದ ಮನವಿಯನ್ನು ಪರಿಶೀಲನೆ ನಡೆಸಿ ನಂತರ ಆ ವರದಿಯನ್ನು ಸೆಕೆಂಡರಿ ಬೋರ್ಡ್ ಪರಿಶೀಲನೆ ನಡೆಸುತ್ತದೆ. ಬಳಿಕ ಕೋರ್ಟ್ಗೆ ವರದಿಯ ಪ್ರತಿ ನೀಡಲಾಗುತ್ತದೆ. ಕೋರ್ಟ್ ಅನುಮತಿ ನೀಡಿದ ಬಳಿಕ ರೋಗಿಯ ಲೈಫ್ ಸಪೋರ್ಟ್ ಸಿಸ್ಟಮ್ ಅನ್ನು ವೈದ್ಯರು ತೆಗೆಯುತ್ತಾರೆ.





















