
ಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆ, ಕಾರ್ಕಳ ಇಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಸಾಂದೀಪನಿ ಸಾಧನಾಶ್ರಮ ಶ್ರೀ ಕ್ಷೇತ್ರ ಕೇಮಾರು ಇಲ್ಲಿನ ಶ್ರೀ ಶ್ರೀ ಶ್ರೀ ಈಶವಿಠಲದಾಸ ಸ್ವಾಮೀಜಿಯವರು ಗಿಡ ನೆಡುವುದರ ಮೂಲಕ ಕಾರ್ಯಕ್ರಮವನ್ನು ನೆರವೇರಿಸಿ, ಪರಿಸರದ ಬಗ್ಗೆ ಹಿತನುಡಿಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಶಾಲಾ ಅಧ್ಯಕ್ಷರಾದ ಜೇಸಿ ಚಿತ್ತರಂಜನ್ ಶೆಟ್ಟಿ ಅವರು, ಜೇಸಿ ಪದ್ಮ ಪ್ರಸಾದ್ ಜೈನ್ ರವರು, ಜೇಸಿ ಅವಿನಾಶ್ ರವರು, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶ್ರೀಮತಿ ಮಮತಾ ರವರು, ಶಾಲಾ ಮುಖ್ಯೋಪಾಧ್ಯಾಯರಾದ ಡಾ. ಶಂಕರನ್ ಪಿ ನಂಬೂಧರಿಯವರು ಹಾಗೂ ಆಡಳಿತ ಅಧಿಕಾರಿ ಪ್ರಣಿತ್ ರವರು ಉಪಸ್ಥಿತರಿದ್ದರು.

































