
ಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿಗಳಾದ ಕುಮಾರಿ ಶ್ರೀಮಾ, ಆಧ್ಯ ಪಡ್ರೆ, ಅಮೃತಾ, ಚಾನ್ವಿ, ಸ್ನೇಹಾ , ಶರಧಿ, ಸುದೀಕ್ಷಾ, ಸಚಿತ್, ಸೃಜನ್, ಹಂಸ, ವೇದಾಂತ್ , ಪ್ರಸಿದ್ಧ್, ಶ್ರೇಯಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿ ರಾಜ್ಯಮಟ್ಟದಲ್ಲಿ ರ್‍ಯಾಂಕ್ ಪಡೆದುಕೊಂಡಿದ್ದಾರೆ.
ಇವರನ್ನು ಶಾಲಾ ಅಧ್ಯಕ್ಷರಾದ ಜೇಸಿ ಚಿತ್ತರಂಜನ್ ಶೆಟ್ಟಿ ಯವರು, ಶಾಲಾ ಆಡಳಿತ ಮಂಡಳಿ, ಶಾಲಾ ಮುಖ್ಯೋಪಾಧ್ಯಾಯನಿ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಅಭಿನಂದಿಸಿದರು.











