
ವಿಟ್ಲ: ಡಿಸೆಂಬರ್ 8 ಭಾನುವಾರದಂದು ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಬಾಲಕಿಗಳು ಜೋಕಾಲಿಯಲ್ಲಿ ಆಟ ಆಡುತ್ತಿರುವಾಗ ಕುತ್ತಿಗೆಗೆ ಹಗ್ಗ ಬಿಗಿದು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ.
ಬುಡೋಳಿ ಮಡಲ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ ಎಂಬ ಬಾಲಕಿ ಶೇರಾ ಶಾಲೆಯಲ್ಲಿ 3ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು ಈಕೆ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಈ ದುರ್ಘಟನೆ ನಡೆದಿದೆ. ವಿಟ್ಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



















