
ಕಾರ್ಕಳ: ಫೆಬ್ರವರಿ 14 ಮತ್ತು 15ರಂದು, ಜ್ಯೋತಿ ಯುವಕ ಮಂಡಲ (ರಿ.) ಮತ್ತು ಜ್ಯೋತಿ ಮಹಿಳಾ ಮಂಡಲ ಇದರ 64ನೇ ವಾರ್ಷಿಕೋತ್ಸವದ ಪ್ರಯುಕ್ತ ಸತ್ಯನಾರಾಯಣ ಪೂಜೆ ಹಾಗೂ ವಿವಿಧ ಕಾರ್ಯಕ್ರಮಗಳು ಜ್ಯೋತಿ ರಂಗಮಂಟಪ, ಶ್ರೀ ಕಾಳಿಕಾಂಬ ದೇವಸ್ಥಾನದ ಬಳಿ ನಡೆಯಲಿದೆ.
ದಿನಾಂಕ 14.02.2025 ರಂದು ಸಂಜೆ 6 ಗಂಟೆಯಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದ್ದು ಬಳಿಕ 7:30 ರಿಂದ ಭಜನಾ ಕಾರ್ಯಕ್ರಮ ಹಾಗೂ ರಾತ್ರಿ 8:30ಕ್ಕೆ ಮಹಾಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ಉದ್ಯಮಿ ಹಾಗೂ ಸಮಾಜಸೇವಕರಾದ ಬೋಳ ಪ್ರಶಾಂತ್ ಕಾಮತ್ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕಾರ್ಕಳದ ರೋಟರಿ ಕ್ಲಬ್ ಅಧ್ಯಕ್ಷರು ಇಕ್ಬಾಲ್ ಅಹಮದ್, ಫೇಲಿಕ್ಸ್ ವಾಚ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ದಿನಾಂಕ 15.02.2025 ರಂದು ಬೆಳಗ್ಗೆ 10 ಗಂಟೆಗೆ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಅವಿನಾಶ್ ಜಿ. ಶೆಟ್ಟಿ ಅವರು ಧ್ವಜಾರೋಹಣ ನಡೆಸಲಿದ್ದು ,ಜ್ಯೋತಿ ಯುವಕ ಮಂಡಲದ ಅಧ್ಯಕ್ಷರಾದ ಪ್ರಶಾಂತ್ ರಾವ್ ಹಾಗೂ ಜ್ಯೋತಿ ಮಹಿಳಾ ಮಂಡಲ ಅಧ್ಯಕ್ಷರಾದ ಶ್ರೀಮತಿ ಭವ್ಯ ಅವರು ಪಾಲ್ಗೊಳ್ಳಲಿದ್ದಾರೆ.
ಬೆಳಗ್ಗೆ 10:30 ಕ್ಕೆ ಛದ್ಮವೇಷ ಸ್ಪರ್ಧೆ ನಡೆಯಲಿದ್ದು, ರಾತ್ರಿ 8:30ರ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಯುವಕ ಮಂಡಲದ ಮಕ್ಕಳು ಹಾಗೂ ಸದಸ್ಯ ಸದಸ್ಯೆರಿಂದ “ನೃತ್ಯ ವೈಭವ” ಹಾಗೂ ಕುರಲ್ ಕಲಾವಿದೆರ್ ಬೆದ್ರ ಇವರ ತಂಡದಿಂದ “ಯೇರ್” ಎಂಬ ತುಳು ಹಾಸ್ಯಮಯ ನಾಟಕ ನಡೆಯಲಿದೆ.



















