
ಮೈಸೂರು: ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಶನಿವಾರ ನಗರದ ದಸರಾ ವಸ್ತುಪ್ರದರ್ಶನ ಆವರಣದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಸ್ಥಾಪಿಸಿರುವ ಆಹಾರ ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದ್ದು ಈ ವೇಳೆ ಪರಿಷ್ಕರಣೆಯಲ್ಲಿ ಅರ್ಹರ ಕಾರ್ಡ್ ಬಿಪಿಎಲ್ ನಿಂದ ಎಪಿಎಲ್ ಗೆ ವರ್ಗಾವಣೆ ಆಗಿದ್ದಲ್ಲಿ ಎರಡು ದಿನಗಳಲ್ಲಿ ಪುನಃ ಬಿಪಿಎಲ್ ಕಾರ್ಡ್ ವಿತರಿಸಲಾಗುವುದು ಎಂದು ತಿಳಿಸಿದರು.
ಪಡಿತರ ಕಾರ್ಡ್ ಗಳ ಪರಿಷ್ಕರಣೆ ನಡೆಸಲಾಗಿದ್ದು, ಅರ್ಹರು ಒಂದು ವೇಳೆ ಬಿಪಿಎಲ್ ನಿಂದ ಎಪಿಎಲ್ ಗೆ ವರ್ಗಾವಣೆಯಾಗಿದ್ದರೆ ಸಂಬಂಧಿಸಿದ ತಾಲೂಕಿನಲ್ಲಿ ತಹಸೀಲ್ದಾರರಿಗೆ ಭೇಟಿ ಮಾಡಿ ಮನವಿ ಸಲ್ಲಿಸಬೇಕು. ಅವರು ಪರಿಶೀಲನೆ ನಡೆಸಿ ಪುನಃ ಬಿಪಿಎಲ್ ಕಾರ್ಡ್ ವಿತರಿಸಲು ಕ್ರಮ ವಹಿಸುವರು ಎಂದು ತಿಳಿಸಿದ್ದಾರೆ.
ಅನ್ನಭಾಗ್ಯ ಯೋಜನೆಯಡಿ ಅರ್ಹ ಪ್ರತಿ ಫಲಾನುಭವಿಗೆ 10 ಕೆ.ಜಿ ಅಕ್ಕಿ ವಿತರಣೆ ಮಾಡುತ್ತಿದ್ದು, ಮುಂದಿನ ತಿಂಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಹೇಳಿದರು.



















































