
ಭಾರಿ ಮಳೆಯ ಹಿನ್ನೆಲೆ,ತಮಿಳುನಾಡಿನ ದೇವಸ್ಥಾನದ ಪಟ್ಟಣ ತಿರುವಣ್ಣಾಮಲೈನಲ್ಲಿ ಭೂಕುಸಿತ ಉಂಟಾಗಿದ್ದು, ಏಳು ಮಂದಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ.
ಚೆನ್ನೈ ನಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ತಜ್ಞರ ತಂಡವು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು ಭಾರಿ ಮಳೆ ಆಗುತ್ತಿರುವ ಕಾರಣ ಕಾರ್ಯಾಚರಣೆಗೆ ಅಡಚಣೆಯಾಗಿದೆ. ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಮಿಳುನಾಡು ಸರಕಾರ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.



















