
ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಡುಪಿ ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಹಾಗೂ ಸರಕಾರಿ ಸಂಯುಕ್ತ ಪ್ರೌಢಶಾಲೆ ರೆಂಜಾಳ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕ-
ಬಾಲಕಿಯರ ಚೆಸ್ ಪಂದ್ಯಾಟದಲ್ಲಿ ಕಾರ್ಕಳ ಜ್ಷಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿಧ್ಯಾರ್ಥಿಗಳಾದ ಸುಮುಖ ಎಸ್.ಆರ್ ಹಾಗೂ ಅನ್ವಿ ಹೆಚ್ ಅಂಚನ್ ಇವರು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
14ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ 8ನೇ ತರಗತಿ ವಿಧ್ಯಾರ್ಥಿನಿಯಾದ ಜೇಷ್ಠ ನಾಯಕ್ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಪ್ರಾಥಮಿಕ ವಿಭಾಗದಲ್ಲಿ 6ನೇ ತರಗತಿಯ ವಿಧ್ಯಾರ್ಥಿಯಾದ ರಿಷಿಕ್ ಹಾಗೂ 7ನೇ ತರಗತಿಯ ವಿಧ್ಯಾರ್ಥಿಯಾದ ವ್ಯೋಮ್ ಜಿ ಫಾಯ್ದೆ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ವಿಜೇತ ವಿಧ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂಧಿಸಿದರು.













