
ಹಾವೇರಿ: ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಹಲಗೇರಿ ಬೈಪಾಸ್ ಬಳಿ ದೇವರ ದರ್ಶನಕ್ಕೆಂದು ತಿರುಪತಿಗೆ ಹೋಗುತ್ತಿದ್ದಾಗ ಕಾರು ಏಕಾಏಕಿ ನಸುಕಿನಜಾವ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು , 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಸಂಭವಿಸಿದೆ.
ನಗರದ ಸಮಗಂಡಿ ಮತ್ತು ಬಾರ್ಕಿ ಎಂಬ ಎರಡು ಕುಟುಂಬಗಳು ದೇವರ ದರ್ಶನಕ್ಕೆಂದು ಕಾರಿನಲ್ಲಿ ಹೋಗುತ್ತಿದ್ದ ವೇಳೆ ರಾಣೆಬೆನ್ನೂರಿನ ರಾಷ್ಟ್ರೀಯ ಹೆದ್ದಾರಿ-4ರ (NH-4) ಹಲಗೇರಿ ಬ್ರಿಡ್ಜ್‌ಬಳಿ ಅಪಘಾತ ಸಂಭವಿಸಿದ್ದು ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಮೃತರನ್ನ ಸುರೇಶ ಜಾಡಿ (54), ಐಶ್ವರ್ಯ ಬಾರ್ಕಿ (22), ಚೇತನಾ (7), ಪವಿತ್ರಾ ಸಮಗಂಡಿ (28) ಎಂದು ಗುರುತಿಸಲಾಗಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ರಾಣೆಬೆನ್ನೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






















































