28.3 C
Udupi
Thursday, April 30, 2026
spot_img
spot_img
HomeBlogತುಳಸಿ ವಿವಾಹ

ತುಳಸಿ ವಿವಾಹ

ಆಧಾರ: ಸನಾತನ ಸಂಸ್ಥೆ ನಿರ್ಮಿಸಿದ ಗ್ರಂಥ ಹಬ್ಬ ಧಾರ್ಮಿಕ ಉತ್ಸವ ಮತ್ತು ವ್ರತಗಳು

ದೀಪಾವಳಿ ಹಬ್ಬದ ನಂತರ ಬರುವ ಇನ್ನೊಂದು ಹಬ್ಬ ತುಳಸಿ ಹಬ್ಬ ಅಥವಾ ತುಳಸಿ ಮದುವೆ. ಚಾಂದ್ರಮಾನ ಕಾರ್ತಿಕಮಾಸದ ಶುಕ್ಲಪಕ್ಷದ 12ನೇ ದಿನ ಅಂದರೆ ಉತ್ಥಾನ ದ್ವಾದಶಿಯ ಈ ಪವಿತ್ರ ದಿನವನ್ನು ತುಳಸಿ ಮದುವೆಯನ್ನಾಗಿ ಆಚರಿಸುವರು. ಅಂದಿನ ದಿನ ರೇವತಿ ನಕ್ಷತ್ರದ ಯೋಗವಿದ್ದರೆ ಇನ್ನೂ ಶ್ರೇಷ್ಠ. ಈ ದಿನದಂದು ಭಗವಾನ್ ವಿಷ್ಣುವು ತುಳಸಿ ದೇವಿಯನ್ನು ಸಾಲಿಗ್ರಾಮದ ರೂಪದಲ್ಲಿ ಅಥವಾ ಪ್ರಬೋಧಿನಿ ಏಕಾದಶಿಯಂದು ಶ್ರೀ ಕೃಷ್ಣನ ಅವತಾರದಲ್ಲಿ ವಿವಾಹವಾದರು ಎನ್ನಲಾಗಿದೆ. ಹಿಂದೂ ಧರ್ಮ ಗ್ರಂಥಗಳ ಪ್ರಕಾರ, ತುಳಸಿ ಮಾತೆಯನ್ನು ವಿಷ್ಣುವಿನ ಪತ್ನಿಯಾದ ಲಕ್ಷ್ಮಿ ದೇವಿಯ ಅವತಾರ ಎಂದು ಹೇಳಲಾಗುತ್ತದೆ.

ತುಳಸಿಯೊಂದಿಗೆ ಶ್ರೀವಿಷ್ಣುವಿನ (ಬಾಲಕೃಷ್ಣನ ಮೂರ್ತಿಯ) ವಿವಾಹವನ್ನು ಮಾಡುವುದೇ ತುಳಸಿ ವಿವಾಹದ ವಿಧಿಯಾಗಿದೆ. ವಿವಾಹದ ಹಿಂದಿನ ದಿನ ತುಳಸಿ ಬೃಂದಾವನವನ್ನು ಬಣ್ಣ ಹಚ್ಚಿ ಅಲಂಕರಿಸುತ್ತಾರೆ. ಬೃಂದಾವನದಲ್ಲಿ ಕಬ್ಬು, ಚೆಂಡುಹೂವುಗಳನ್ನು ಹಾಕುತ್ತಾರೆ ಮತ್ತು ಅದರ ಬುಡದಲ್ಲಿ ಹುಣಸೇಕಾಯಿ ಮತ್ತುನೆಲ್ಲಿ ಕಾಯಿಗಳನ್ನು ಇಡುತ್ತಾರೆ. ತುಳಸಿ ಗಿಡವನ್ನು ಹೂವುಗಳು, ಆಭರಣಗಳು ಮತ್ತು ಮಾವಿನ ಎಲೆಗಳಿಂದ ಅಲಂಕರಿಸುತ್ತಾರೆ. ತುಳಸಿ ಕಟ್ಟೆಯನ್ನು ಅಲಂಕರಿಸಿ ವಿಷ್ಣುವಿನ ಅವತಾರ ಕೃಷ್ಣನ ಮೂರ್ತಿಯನ್ನಿರಿಸಿ ಪೂಜಿಸಲಾಗುತ್ತದೆ. ದೀಪದಿಂದ ತುಳಸಿ ಕಟ್ಟೆಯ ಸುತ್ತ ಅಲಂಕರಿಸಲಾಗುತ್ತದೆ. ಈ ವಿವಾಹದ ವಿಧಿಯನ್ನು ಸಾಯಂಕಾಲ ಮಾಡುತ್ತಾರೆ. ಮಂತ್ರಗಳನ್ನು ಪಠಿಸಲಾಗುತ್ತದೆ ಮತ್ತು ವಿವಾಹದ ವಿಧಿ ವಿಧಾನಗಳನ್ನು ಭಕ್ತಿ ಮತ್ತು ಗೌರವದಿಂದ ನಡೆಸಲಾಗುತ್ತದೆ.

ಮಳೆಗಾಲದ ನಾಲ್ಕು ತಿಂಗಳುಗಳಲ್ಲಿ ಮಳೆಯು ಹೆಚ್ಚಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಸನ್ಯಾಸಿಗಳು ದೇಶಸಂಚಾರವನ್ನು ಮಾಡದೇ ಒಂದೆಡೆಯಲ್ಲಿ, ಚಾತುರ್ಮಾಸ್ಯ ವ್ರತವನ್ನು ಆಚರಿಸುವರು. ಆ ಸಂದರ್ಭದಲ್ಲಿ ಶ್ರೀಮನ್ನಾರಾಯಣನು ನಿದ್ರಾವಸ್ಥೆಯಲ್ಲಿರುತ್ತಾನೆಂದೂ, ಚಾತುರ್ಮಾಸ್ಯ ಮುಗಿಯುವ ವೇಳೆಯಲ್ಲಿ ಅವನನ್ನು ಎಬ್ಬಿಸಲು ಸುಪ್ರಭಾತವನ್ನು ಹಾಡುವರು. ಉತ್ಥಾನವೆಂದರೆ ಏಳು ಎಂಬರ್ಥ. ಶ್ರೀಮನ್ನಾರಾಯಣನು ತನ್ನ ನಿದ್ರಾವಸ್ಥೆಯಿಂದ ಹೊರಬಂದು ತನ್ನ ಭಕ್ತಾದಿಗಳಿಗೆ ದರ್ಶನ ಕೊಡುವನೆಂಬ ಪ್ರತೀತಿ ಇದೆ. ತುಳಸಿ ವಿವಾಹದ ಬಳಿಕ ಚಾತುರ್ಮಾಸದಲ್ಲಿ ಕೈಗೊಂಡ ಎಲ್ಲ ವ್ರತಗಳನ್ನು ಸಮಾಪ್ತಗೊಳಿಸುತ್ತಾರೆ. ಚಾತುರ್ಮಾಸದಲ್ಲಿ ಯಾವ ಪದಾರ್ಥಗಳನ್ನು ವರ್ಜ್ಯ ಮಾಡಿರುತ್ತಾರೆಯೋ, ಆ ಪದಾರ್ಥಗಳನ್ನು ಬ್ರಾಹ್ಮಣರಿಗೆ ದಾನ ಮಾಡಿ ನಂತರ ತಾವೂ ಸೇವಿಸುತ್ತಾರೆ.

ಈ ಆಚರಣೆಯು ವೈದಿಕ ಸಂಸ್ಕೃತಿಯಲ್ಲಿ ತುಳಸಿ ದೇವಿಯ ಪ್ರಾಮುಖ್ಯತೆಯನ್ನು ಸೂಚಿಸುತ್ತದೆ ಮತ್ತು ಭಕ್ತಿ ಮತ್ತು ಶುದ್ಧತೆಯ ಮಹತ್ವವನ್ನು ಸೂಚಿಸುತ್ತದೆ. ತುಳಸಿ ವಿವಾಹದಲ್ಲಿ ಪಾಲ್ಗೊಳ್ಳುವುದು ಭಕ್ತರಿಗೆ ಆಶೀರ್ವಾದ, ಆಧ್ಯಾತ್ಮಿಕ ಬೆಳವಣಿಗೆ ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು ನಂಬಲಾಗಿದೆ.

              ******
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page