
ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ್ದ,ತೆಂಕುತಿಟ್ಟುವಿನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ್ ಆಚಾರ್ಯ (67) ಇಂದು ಹೃದಯಘಾತದಿಂದ ನಿಧನ ಹೊಂದಿದ್ದಾರೆ.
ಹಲವು ಮೇಳಗಳಲ್ಲಿ ಹಾಸ್ಯ ಕಲಾವಿದರಾಗಿ ಸೇವೆ ಸಲ್ಲಿಸಿದ್ದ ಜಯರಾಮ್ ಆಚಾರ್ಯ, ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಇವರ ನೇತೃತ್ವದ ತಂಡದಲ್ಲಿ ಅ. 21ರಂದು ಬೆಂಗಳೂರಿನಲ್ಲಿ ನಡೆಯಬೇಕಾಗಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ್ದು, ಇಂದು ಬೆಳಿಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.













