31.6 C
Udupi
Tuesday, March 24, 2026
spot_img
spot_img
HomeBlogದ. ಕ: ಪಿಯುಸಿ ವಿದ್ಯಾರ್ಥಿ ನಿಗೂಢ ನಾಪತ್ತೆ ಪ್ರಕರಣದಲ್ಲಿ ಮಾರ್ಚ್ 12ರ ಒಳಗೆ ತನಿಖಾ ವರದಿಯನ್ನು...

ದ. ಕ: ಪಿಯುಸಿ ವಿದ್ಯಾರ್ಥಿ ನಿಗೂಢ ನಾಪತ್ತೆ ಪ್ರಕರಣದಲ್ಲಿ ಮಾರ್ಚ್ 12ರ ಒಳಗೆ ತನಿಖಾ ವರದಿಯನ್ನು ಒಪ್ಪಿಸುವಂತೆ ಪೊಲೀಸರಿಗೆ ಆದೇಶಿಸಿದ ಹೈಕೋರ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಫೆಬ್ರವರಿ 25ರಿಂದ ನಾಪತ್ತೆಯಾಗಿದ್ದು ನಾಪತ್ತೆಯಾಗಿ 10 ದಿನವಾದರೂ ವಿದ್ಯಾರ್ಥಿಯ ಸುಳಿವು ಸಿಕ್ಕಿಲ್ಲ. ಹೀಗಾಗಿ ವಿದ್ಯಾರ್ಥಿ ದಿಗಂತ್ ಪೋಷಕರು ಹೈಕೋರ್ಟ್ ಮೊರೆ ಹೋಗಿ ಮಗನನ್ನು ಪತ್ತೆ ಮಾಡಿಕೊಡಲು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ದಿಗಂತ್ ತಂದೆ ಪದ್ಮನಾಭ್ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಜಸ್ಟೀಸ್ ವಿ.ಕಾಮೇಶ್ವರ್ ರಾವ್, ಜಸ್ಟೀಸ್ ಟಿ.ಎಂ ನಡಾಫ್ರಿಂದ ಹೈಕೋರ್ಟ್ ದ್ವಿಸದಸ್ಯ ವಿಭಾಗೀಯ ಪೀಠವು ಮಾರ್ಚ್ 12 ರ ಒಳಗೆ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಪೊಲೀಸರಿಗೆ ಆದೇಶ ಹೊರಡಿಸಿದೆ.

ಫೆ.25ರ‌ ಸಂಜೆ ವೇಳೆಗೆ ಫರಂಗಿಪೇಟೆ ಆಂಜನೇಯ ವ್ಯಾಯಾಮ ಶಾಲೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ದಿಗಂತ್, ದೇವಸ್ಥಾನಕ್ಕೂ ಹೋಗದೆ ಮನೆಗೂ ಬಾರದೆ ನಾಪತ್ತೆಯಾಗಿದ್ದ.

ಬಳಿಕ ಫರಂಗಿಪೇಟೆಯಲ್ಲಿ ರೈಲ್ವೆ ಹಳಿಯಲ್ಲಿ ದಿಗಂತ್ ಚಪ್ಪಲಿ ಹಾಗೂ ಮೊಬೈಲ್ ಪತ್ತೆಯಾಗಿತ್ತು. ಒಂದು ಚಪ್ಪಲಿಯಲ್ಲಿ ರಕ್ತದ ಕಲೆ ಕಂಡುಬಂದಿತ್ತು. ಸದ್ಯ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ನಾಪತ್ತೆಯಾದ ಸಂದರ್ಭದಲ್ಲಿ ಪೊಲೀಸರು ದೂರು ಸ್ವೀಕರಿಸಿ ತಕ್ಷಣವೇ ಕ್ರಮಕೈಗೊಳ್ಳದ ಬಗ್ಗೆ ಅರ್ಜಿಯಲ್ಲಿ ಉಲ್ಲೇಖಿಸಲಾಗಿದ್ದು ಆರಂಭದಲ್ಲೇ ಸರಿಯಾದ ನಿಟ್ಟಿನಲ್ಲಿ ತನಿಖೆ ಆರಂಭಿಸದ ಪೊಲೀಸರು ದಿಗಂತ್ ಪತ್ತೆಗೆ ಅವಕಾಶ ಇದ್ದ ಅಮೂಲ್ಯ ಸಮಯವನ್ನು ಹಾಳು ಮಾಡಿದ್ದಾರೆ. ಮಾರ್ಚ್ 1 ರಂದು ಫರಂಗಿಪೇಟೆ ಬಂದ್ ಮಾಡಿದ ಬಳಿಕ ಏಳು ತನಿಖಾ ತಂಡಗಳನ್ನು ರಚಿಸಿ ತನಿಖೆಯನ್ನು ಆರಂಭಿಸಿದ್ದಾಗಿ ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ.

ಈ ಪ್ರಕರಣದ ಹಿಂದೆ ಗಾಂಜಾ ಗ್ಯಾಂಗ್ ಕೈವಾಡ ಇರುವ ಅನುಮಾನ ವ್ಯಕ್ತಪಡಿಸಿ, ಪೊಲೀಸರು ಈ ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿ ಹಿಂದೂಪರ ಸಂಘಟನೆ ವಿ.ಎಚ್.ಪಿ, ಬಜರಂಗದಳ, ಬಿಜೆಪಿ ಇತ್ತೀಚೆಗೆ ಫರಂಗಿಪೇಟೆ ಬಂದ್ ನಡೆಸಿ ಪೊಲೀಸ್ ಇಲಾಖೆ ವಿರುದ್ದ ಪ್ರತಿಭಟಿನೆ ಮಾಡಲಾಗಿತ್ತು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page