
ಟೀಮ್ ಇಂಡಿಯಾದ ಖ್ಯಾತ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಬ್ರಿಸ್ಬೇನ್ನಲ್ಲಿ ನಡೆದ ಗಾಬಾ ಟೆಸ್ಟ್ ಪಂದ್ಯದ ಬಳಿಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅವರು ದಿಢೀರ್ ನಿವೃತ್ತಿ ಘೋಷಿಸಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಶ್ವಿನ್ ನನ್ನಲ್ಲಿ ಇನ್ನೂ ಸಹ ಸ್ವಲ್ಪ ಕ್ರಿಕೆಟ್ ಉಳಿದಿದೆ ಎಂದು ಭಾವಿಸುತ್ತೇನೆ. ಅದನ್ನು ನಾನು ಕ್ಲಬ್ ಕ್ರಿಕೆಟ್ನಲ್ಲಿ ಮುಂದುವರೆಸಲು ನಿರ್ಧರಿಸಿದ್ದೇನೆ. ಇದು ಟೀಮ್ ಇಂಡಿಯಾ ಜೊತೆಗಿನ ನನ್ನ ಕೊನೆಯ ದಿನ. ನನ್ನ ಸಹ ಆಟಗಾರರಿಗೆ ಹಾಗೂ ಬಿಸಿಸಿಐಗೆ ಹಾಗೆಯೇ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಚೇತೇಶ್ವರ ಪೂಜಾರ ಸೇರಿದಂತೆ ಎಲ್ಲರಿಗೂ ಧನ್ಯವಾದಗಳು. ಇವರೆಲ್ಲರ ಸಹಕಾರದಿಂದ ನಾನು ವಿಕೆಟ್ ಕಬಳಿಸಿದ್ದೇನೆ. ಇದರ ಜೊತೆಗೆ ಸದಾ ನಮ್ಮೊಂದಿಗೆ ಅತ್ಯುತ್ತಮ ಕ್ರಿಕೆಟ್ ಆಡಿದ ಆಸ್ಟ್ರೇಲಿಯಾ ತಂಡಕ್ಕೂ ನನ್ನ ಧನ್ಯವಾದಗಳು. ಹಾಗೆಯೇ ನನ್ನ ಈ ಜರ್ನಿಯಲ್ಲಿ ಜೊತೆಗೂಡಿದ ಪ್ರತಿಯೊಬ್ಬರಿಗೂ ಧನ್ಯವಾದ ಅರ್ಪಿಸಿದ್ದಾರೆ.