ಶಾಸಕ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಬೆಂಗಳೂರು: ಶಾಸಕ ಬಸವನಗೌಡ ಯತ್ನಾಳ್ ದಿನೇಶ್ ಗುಂಡೂರಾವ್ ಅವರ ಕುಟುಂಬದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಹಿನ್ನೆಲೆ, ದಿನೇಶ್ ಗುಂಡೂರಾವ್ ಅವರ ಪತ್ನಿ ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಹಿನ್ನೆಲೆ ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ, ಎನ್ಐ ಏ ಅಧಿಕಾರಿಗಳು ಬಿಜೆಪಿ ಕಾರ್ಯಕರ್ತನ ವಿಚಾರಣೆ ನಡೆಸಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ದಿನೇಶ್ ಗುಂಡೂರಾವ್ ಬಿಜೆಪಿಯನ್ನು ಟೀಕಿಸಿದ್ದರು. ಈ ವಿಚಾರಕ್ಕೆ ಪ್ರತಿಕ್ರಿಸುತ್ತಾ ಶಾಸಕ ಯತ್ನಾಳ್ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದು, ಇವರ ಮೇಲೆ ಇದೀಗ ಗುಂಡೂ ರಾವ್ ಪತ್ನಿ ಕೇಸು ದಾಖಲಿಸಿದ್ದಾರೆ.













