
ನವದೆಹಲಿ: ಏಪ್ರಿಲ್ 10ರಿಂದ ದೇಶಾದ್ಯಂತ ಎಲ್ಲಾ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಟೋಲ್ ಸಂಗ್ರಹಣೆಯನ್ನು ಸಂಪೂರ್ಣ ಡಿಜಿಟಲ್ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಮಹತ್ವದ ಕ್ರಮ ಕೈಗೊಂಡಿದೆ.
ಫಾಸ್ಟ್‌ಟ್ಯಾಗ್ ಇಲ್ಲದ ವಾಹನಗಳಿಗೆ ಯುಪಿಐ ಮೂಲಕ ಪಾವತಿಸುವ ಅವಕಾಶ ಇರುತ್ತದೆ. ಆದರೆ ಈ ವಿಧಾನವನ್ನು ಬಳಸಿದರೆ ಸಾಮಾನ್ಯ ಶುಲ್ಕಕ್ಕಿಂತ 25 ಶೇಕಡಾ ಹೆಚ್ಚುವರಿ ಹಣ ಪಾವತಿಸಬೇಕಾಗುತ್ತದೆ. ಫಾಸ್ಟ್‌ಟ್ಯಾಗ್ ಹಾಗೂ ಯುಪಿಐ ಎರಡನ್ನೂ ನಿರಾಕರಿಸಿದರೆ ವಾಹನ ಪ್ರವೇಶಕ್ಕೆ ನಿರ್ಬಂಧ ಅಥವಾ ನೋಟಿಸ್ ನೀಡುವ ಕ್ರಮ ಕೈಗೊಳ್ಳಬಹುದು. ಮೂರು ದಿನಗಳೊಳಗೆ ದಂಡ ಪಾವತಿಸದಿದ್ದರೆ ದ್ವಿಗುಣ ದಂಡ ವಿಧಿಸುವ ಸಾಧ್ಯತೆ ಇದೆ.
ಟೋಲ್ ಪ್ಲಾಜಾಗಳಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಿ ಕಾಯುವ ಸಮಯವನ್ನು ಇಳಿಸಲು ಈ ಕ್ರಮ ಜಾರಿಗೊಳಿಸಲಾಗುತ್ತಿದೆ. ಜೊತೆಗೆ ಖಾಸಗಿ ವಾಹನಗಳಿಗೆ ಗುರುತಿನ ಚೀಟಿ ಆಧಾರಿತ ವಿನಾಯಿತಿ ವ್ಯವಸ್ಥೆಯನ್ನು ರದ್ದುಪಡಿಸಲಾಗಿದೆ. ಇನ್ನು ಮುಂದೆ ವಿಶೇಷ ಫಾಸ್ಟ್‌ಟ್ಯಾಗ್ ಹೊಂದಿರುವ ಅಧಿಕೃತ ವಾಹನಗಳಿಗೆ ಮಾತ್ರ ಟೋಲ್ ವಿನಾಯಿತಿ ಲಭ್ಯವಾಗಲಿದೆ.











































