
ವಾಷಿಂಗ್ಟನ್: ಇಲ್ಲಿನ ಹಿಲ್ಸ್ ಹೋಟೇಲ್ನಲ್ಲಿ ನಡೆದ ಗುಂಡಿನ ದಾಳಿ ಕುರಿತು ಪತ್ರಕರ್ತರೊಬ್ಬರು ಶ್ವೇತಭವನದಲ್ಲಿ ಟ್ರಂಪ್ ಅವರಿಗೆ, ಇಂತಹ ಘಟನೆಗಳು ಯಾಕೆ ನಿಮಗೆ ಮರುಕಳಿಸುತ್ತಿದೆ ನಡೆಯುತ್ತಿವೆ ಎಂದು ಪ್ರಶ್ನಿಸಿದ್ದು ಇದಕ್ಕೆ ಪ್ರತಿಕ್ರಿಯಿಸಿದ ಟ್ರಂಪ್, ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರುವ ವ್ಯಕ್ತಿಗಳು ಇಂತಹ ಸಂದರ್ಭಗಳನ್ನು ಎದುರಿಸಬೇಕಾದ ಪರಿಸ್ಥಿತಿ ಬರುತ್ತದೆ ಎಂದು ಗುಂಡಿನ ದಾಳಿಗೆ ಬಲಿಯಾಗಿದ್ದ ಅಮೇರಿಕಾದ ಅಧ್ಯಕ್ಷ ಅಬ್ರಾಹಿಂ ಲಿಂಕನ್ ಅವರನ್ನು ಉದಾಹರಣೆಯಾಗಿ ಉಲ್ಲೇಖಿಸಿದರು.
ಮುಂದುವರೆದು ಮಾತನಾಡಿದ ಟ್ರಂಪ್ ನಾನು ದೇಶಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದೇನೆ, ದೇಶದಲ್ಲಿ ಬದಲಾವಣೆ ತಂದಿದ್ದೇವೆ. ಆದರೆ ಅದನ್ನು ಒಪ್ಪದವರೂ ಇದ್ದಾರೆ ಎಂದು ಅವರು ಹೇಳಿದರು. ಅಲ್ಲದೆ ಶ್ವೇತಭವನದ ಪತ್ರಕರ್ತರಿಗಾಗಿ ಆಯೋಜಿಸಿದ್ದ ಈ ಕಾರ್ಯಕ್ರಮ ನಡೆದ ವಾಷಿಂಗ್ಟನ್ ಹಿಲ್ಟನ್ ಹೋಟೇಲ್ ಸುರಕ್ಷಿತವಲ್ಲ ಎಂದು ಟ್ರಂಪ್ ಅಭಿಪ್ರಾಯಪಟ್ಟರು. ಆದ್ದರಿಂದ ಹೊಸ ಸಭಾಂಗಣ ನಿರ್ಮಾಣ ಅಗತ್ಯವಿದೆ ಎಂದು ಅವರು ಒತ್ತಿ ಹೇಳಿದರು.













