ಧರ್ಮಸ್ಥಳ ಪ್ರಕರಣಕ್ಕೂ ಇದಕ್ಕೂ ಸಂಬಂಧ ಇಲ್ಲವೆಂದ ಕುಟುಂಬಸ್ಥರು

ನೆಲಮಂಗಲ: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ವೇಳೆ ಪಾಯಿಂಟ್ ನಂಬರ್ 1 ನಲ್ಲಿ ಸಿಕ್ಕ ಡೆಬಿಟ್, ಪ್ಯಾನ್ ಕಾರ್ಡ್ ವಾರಸುದಾರರ ವಿಳಾಸ ಪತ್ತೆಯಾಗಿದ್ದು ಇದು ಬೆಂಗಳೂರಿನ ಹೊರವಲಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ನಿವಾಸಿಯಾಗಿದ್ದ ಸುರೇಶ್ ಎಂಬಾತನದ್ದು ಎಂದು ಗುರುತಿಸಲಾಗಿದೆ.
ಸುರೇಶ್ ಪರ್ಸ್ ನಲ್ಲಿ ಎರಡು ಪಾನ್ ಕಾರ್ಡ್ ಗಳು ಪತ್ತೆಯಾಗಿದ್ದು ಒಂದು ಸುರೇಶ್ ಎಂಬಾತನ ಪಾನ್ ಕಾರ್ಡ್, ಮತ್ತೊಂದು ಅವರ ತಾಯಿ ಸಿದ್ದಲಕ್ಷ್ಮಮ್ಮ ಅವರ ಪ್ಯಾನ್ ಕಾರ್ಡ್ ಎಂಬುದು ಪತ್ತೆಯಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ಸುರೇಶ್ ಎಂಬಾತ ಮನೆ ಬಿಟ್ಟು ಹೋಗಿ ಧರ್ಮಸ್ಥಳಕ್ಕೆ ತೆರಳಿದ್ದು ಮಾರ್ಚ್ ತಿಂಗಳಲ್ಲಿ ಜಾಂಡಿಸ್ ನಿಂದಾಗಿ ಸಾವನ್ನಪ್ಪಿದ್ದರು. ಇನ್ನು ಆತನ ತಾಯಿ ಸಿದ್ದಲಕ್ಷ್ಮಮ್ಮ ಬದುಕಿದ್ದು ಈ ಕುರಿತು ಪ್ರತಿಕ್ರಿಯಿಸಿದ ಸುರೇಶ್ ನ ಸಹೋದರಿ ರೂಪ ಸುರೇಶ್ ಸಾಕಷ್ಟು ಬಾರಿ ಧರ್ಮಸ್ಥಳಕ್ಕೆ ಹೋಗುತ್ತಿದ್ದ. ಆಗ ಇದು ಅಲ್ಲೇ ಮಿಸ್ ಆಗಿರಬೇಕು. ನಮ್ಮ ತಾಯಿಯ ಎಟಿಎಂ ಕಾರ್ಡ್ ಕಳೆದು ಹೋಗಿದ್ದು ಹೀಗಾಗಿ ನಮ್ಮ ತಾಯಿ ಹೊಸ ಎಟಿಎಂ ಕಾರ್ಡ್ ತೆಗೆದುಕೊಂಡಿದ್ದರು. ಸುರೇಶ್ ಎರಡು ವರ್ಷಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದು ಐದು ತಿಂಗಳ ಹಿಂದೆ ಇಲ್ಲೇ ಮೃತಪಟ್ಟಿದ್ದಾರೆ. ಧರ್ಮಸ್ಥಳದ ವಿಚಾರಕ್ಕೂ ಇದಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.





