
ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ಎಸ್‍ಐಟಿ ರಚನೆ ಮಾಡಿ ಆದೇಶ ಹೊರಡಿಸಿದೆ.
ಐಪಿಎಸ್ ಅಧಿಕಾರಿಗಳಾದ ಅನುಚೇತ್, ಸೌಮ್ಯಲತಾ ಮತ್ತು ಜಿತೇಂದ್ರ ಕುಮಾರ್ ದಯಾಮಾ ತನಿಖಾ ತಂಡದಲ್ಲಿದ್ದು ಡಿಜಿಐಜಿಪಿಗೆ ತನಿಖಾ ಹಂತದ ಮಾಹಿತಿ ಆಗಿಂದಾಗ ಕೊಟ್ಟು ತನಿಖೆಯ ಅಂತಿಮ ವರದಿಯನ್ನು ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸಬೇಕೆಂದು ಎಸ್‍ಐಟಿ ತಂಡಕ್ಕೆ ಸರ್ಕಾರ ಆದೇಶಿಸಿದೆ.
















































