
ಶ್ರೀನಗರ: ಧಾರಾಕಾರ ಮಳೆಯಿಂದಾಗಿ ಭೂಕುಸಿತ ಉಂಟಾದ ಪರಿಣಾಮ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾತ್ರಿಕರ ಹಿತ ದೃಷ್ಟಿಯಿಂದ ಐದನೇ ದಿನವೂ ವೈಷ್ಣೋದೇವಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಆಧಿಕಾರಿಗಳು ತಿಳಿಸಿದ್ದಾರೆ.
ಈಗಾಗಲೇ ಬೇರೆ ಬೇರೆ ಭಾಗಗಳಿಂದ ಬಂದಿರುವ ಯಾತ್ರಾರ್ಥಿಗಳು ಭೂಕುಸಿತದಿಂದಾಗಿ ಇನ್ನು ಕತ್ರಾದಲ್ಲಿಯೇ ಉಳಿದುಕೊಂಡಿದ್ದು ದೇವರ ದರ್ಶನ ಶೀಘ್ರ ಆರಂಭವಾಗುವ ನಿರೀಕ್ಷೆಯಲ್ಲಿದ್ದಾರೆ.
ಕಳೆದ ಕೆಲ ದಿನಗಳಿಂದ ಅಧಿಕ ಮಳೆಯಿಂದಾಗಿ ಅಲ್ಲಲ್ಲಿ ಮೇಘಸ್ಪೋಟ ಜೊತೆಗೆ ಭೂಕುಸಿತ ಉಂಟಾದ ಹಿನ್ನೆಲೆ ಇದನ್ನೆಲ್ಲಾ ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಯಾತ್ರಾರ್ತಿಗಳಿಗೆ ಸುರಕ್ಷಿತ ಸ್ಥಳದಲ್ಲಿ ಉಳಿಯಲು ವ್ಯವಸ್ಥೆ ಮಾಡಿ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ.