
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಸಂಪುಟ ಪುನಾರಚನೆ ಬಗ್ಗೆ ರಾಹುಲ್ ಗಾಂಧಿ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಚರ್ಚೆ ಮಾಡಲು ನ. 15ಕ್ಕೆ ದೆಹಲಿಗೆ ಹೋಗುತ್ತಿದ್ದೇನೆ ಎಂದು ಹೇಳಿದರು.
ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂಬ ಬಿಹಾರ ಮುಖಂಡರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಯಾರು ಏನೇ ಹೇಳಿದ್ರೂ ಅದು ಮುಖ್ಯವಲ್ಲ. ಕಾಂಗ್ರೆಸ್ ಹೈಕಮಾಂಡ್ ಹೇಳುವುದಷ್ಟೇ ಮುಖ್ಯ. ಕಾಂಗ್ರೆಸ್ ಹೈಕಮಾಂಡ್ ಏನಾದ್ರೂ ಹೇಳಿದ್ಯಾ ಈ ಬಗ್ಗೆ? ಯಾಕೆ ಪದೆ ಪದೆ ಅದನ್ನೇ ಮಾತನಾಡ್ತೀರಾ. ಜನ ಮಾತನಾಡುತ್ತಿಲ್ಲ, ಮಾಧ್ಯಮದವರೇ ಪದೇ ಪದೇ ಮಾತನಾಡುತ್ತಿದ್ದಾರೆ ಅಂತ ಕೋಪಗೊಂಡರು.






















































