
ಉಡುಪಿ: ನವೆಂಬರ್ 28ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಯ ಶ್ರೀಕಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಶ್ರೀಕೃಷ್ಣನ ದರ್ಶನ ಮಾಡಲಿರುವ ಮೋದಿ ವಿಶೇಷವಾಗಿ ಬೃಹತ್ ಗೀತೋತ್ಸವದಲ್ಲೂ ಭಾಗಿಯಾಗಲಿದ್ದಾರೆ.
ಈಗಾಗಲೇ ತಯಾರಿಗಳು ನಡೆದಿದ್ದು ಶ್ರೀಕೃಷ್ಣ ಮಠದ ತಯಾರಿ ಜೊತೆಗೆ ಭದ್ರತಾ ತಯಾರಿಗಳನ್ನು ಎಜೆನ್ಸಿಗಳು ಆರಂಭಿಸಿದೆ. ಮಧ್ಯಾಹ್ನ 12 ಗಂಟೆಗೆ ಶ್ರೀಕೃಷ್ಣ ಮಠಕ್ಕೆ ಆಗಮಿಸಿ ಶ್ರೀ ಕೃಷ್ಣನ ದರ್ಶನ ಮಾಡಲಿದ್ದಾರೆ. ಪ್ರಸಾದ ಸ್ವೀಕರಿಸಿದ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಬಳಿಕ ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಬೃಹತ್ ಗೀತೋತ್ಸವದಲ್ಲೂ ಭಾಗಿಯಾಗಲಿದ್ದಾರೆ.



















































