
ನಂದಳಿಕೆ : ಪಾದಾಚಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಹತ್ತನೇ ತರಗತಿಯ ವಿದ್ಯಾರ್ಥಿನಿ ಪ್ರಾಣಮ್ಯ ಶೆಟ್ಟಿ (14 ವರ್ಷ) ಮೃತಪಟ್ಟ ಘಟನೆ ನಡೆದಿದೆ.
ಲಕ್ಷ್ಮಿ ಜನಾರ್ಧನ ದೇವಸ್ಥಾನದಿಂದ ಪೂಜೆ ಮುಗಿಸಿ ಮನೆಗೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಪ್ರಾಣಮ್ಯ ಶೆಟ್ಟಿ ಎಂಬವರಿಗೆ ಬೈಕ್ ಸವಾರ ಡಿಕ್ಕಿ ಹೊಡೆದಿದು ಡಿಕ್ಕಿಯ ರಬ್ಬಸಕ್ಕೆ ಬಾಲಕಿ ಮೃತಪಟ್ಟಿರುವ ಘಟನೆ ನಡೆದಿದೆ . ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






















































