
ಚೆನ್ನೈ: ಇಂದು ತಮಿಳುನಾಡಿನ ಕರೂರಿನಲ್ಲಿ ನಡೆದ ನಟ-ರಾಜಕಾರಣಿ ವಿಜಯ್ ದಳಪತಿ ರ್ಯಾಲಿಯಲ್ಲಿ ಕಾಲ್ತುಳಿತ ಉಂಟಾಗಿದ್ದು ಪರಿಣಾಮ ಮೂವರು ಮಕ್ಕಳು ಸೇರಿದಂತೆ 33 ಮಂದಿ ಬಲಿಯಾಗಿದ್ದಾರೆ.
ಮೃತ ವಯಸ್ಕರು, ವಿಜಯ್ ಅವರ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಬೆಂಬಲಿಗರಾಗಿದ್ದು ರ್ಯಾಲಿಗಾಗಿ ಕನಿಷ್ಠ ಆರು ಗಂಟೆಗಳ ಕಾಲ ಕಾದಿದ್ದರು. ಸ್ಥಳಕ್ಕೆ ರ್ಯಾಲಿ ತಡವಾಗಿ ಬಂದ ಪರಿಣಾಮ ಹೆಚ್ಚಿನ ಜನಸಂದಣಿಯಾಗಿ ಕಾಲ್ತುಳಿತ ಸಂಭವಿಸಿದೆ. ರಾಜ್ಯ ಆರೋಗ್ಯ ಸಚಿವ ಎಂ. ಸುಬ್ರಮಣಿಯನ್ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವಂತೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೂರ್ ಜಿಲ್ಲಾ ಕಾರ್ಯದರ್ಶಿ ವಿ. ಸೆಂಥಿಲ್ಬಾಲಾಜಿ ಅವರಿಗೆ ಆದೇಶಿಸಿದ್ದಾರೆ.
ಭೀಕರ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ನಟ ರಾಜಕಾರಣಿ ದಳಪತಿ ವಿಜಯ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಹೃದಯ ಚೂರಾಗಿದೆ ನಾನು ಅಸಹನಿಯ ನೋವು ಮತ್ತು ದುಃಖದಲ್ಲಿದ್ದೇನೆ ಹೇಳಿಕೊಳ್ಳಲಾಗದಷ್ಟು ನೋವು. ನನ್ನ ಪ್ರೀತಿಯ ಸಹೋದರ ಸಹೋದರಿಯರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪ ಆಸ್ಪತ್ರೆಯಲ್ಲಿ ಚಿಕಿಸೆ ಪಡೆಯುತ್ತಿರುವವರು ಶೀಘ್ರವೇ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ದುರಂತಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ.






















































