28.9 C
Udupi
Monday, May 4, 2026
spot_img
spot_img
HomeBlogನನ್ನ ಪ್ರಕಾರ ಕರ್ನಾಟಕ ನಕ್ಸಲ್ ಮುಕ್ತ ಆಗಿದೆ: ಸಿಎಂ ಸಿದ್ದರಾಮಯ್ಯ

ನನ್ನ ಪ್ರಕಾರ ಕರ್ನಾಟಕ ನಕ್ಸಲ್ ಮುಕ್ತ ಆಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನಗರದ ಗೃಹ ಕಚೇರಿ ಕೃಷ್ಣದಲ್ಲಿ ನಕ್ಸಲರು ತಮ್ಮ ಮುಂದೆ ಶರಣಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನನ್ನ ಪ್ರಕಾರ ಕರ್ನಾಟಕ ನಕ್ಸಲ್ ಮುಕ್ತ ಆಗಿದೆ. ಶರಣಾದ ನಕ್ಸಲರ ಬೇಡಿಕೆ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ತೀರ್ಮಾನ ಮಾಡ್ತೀವಿ ಎಂದು ಹೇಳಿದರು.

20 ವರ್ಷಗಳು ಹೆಚ್ಚು ಕಾಲ ನಕ್ಸಲ್ ಚಳುವಳಿ ದಾರಿಯಲ್ಲಿ ನಡೆದರು. ಕಾಡಿನಲ್ಲಿ ಇದ್ದು ಚಳುವಳಿ ಮಾಡಿದ 6 ಜನ ನಕ್ಸಲರು ಇಂದು ಶರಣಾಗತಿ ಆಗಿದ್ದಾರೆ. ಸರ್ಕಾರ ಅವರಿಗೆ ಆಹ್ವಾನ ನೀಡಿದ್ದರಿಂದ 6 ಜನ ಶರಣಾಗತಿ ಆಗಿದ್ದಾರೆ. ಹೋರಾಟ ಹಾದಿ ಬಿಟ್ಟು ಪರಿವರ್ತನೆಗೊಂಡು ಮುಖ್ಯವಾಹಿನಿಗೆ ಬರಲು ತೀರ್ಮಾನ ಮಾಡಿ ನನ್ನ ಮುಂದೆ ಶರಣಾಗತಿ ಆಗಿದ್ದಾರೆ. ಅವರಿಗೆ ಶುಭವಾಗಲಿ, ಸರ್ಕಾರಕ್ಕೆ ಅಹವಾಲು, ಬೇಡಿಕೆ ಇಟ್ಟಿದ್ದು ಅವರ ಎಲ್ಲಾ ಬೇಡಿಕೆಯನ್ನ ಸಹಾನುಭೂತಿಯಿಂದ ಸರ್ಕಾರ ಪರಿಗಣಿಸುತ್ತದೆ. ಕೇರಳ, ತಮಿಳುನಾಡು ಸಿಎಂ ಜೊತೆ ಮಾತಾಡಿ ತ್ವರಿತವಾಗಿ ನ್ಯಾಯ ಕೊಡಿಸುವ ಕೆಲಸ ಮಾಡ್ತೀವಿ. ತ್ವರಿತ ನ್ಯಾಯಾಲಯ ಮಾಡಿ, ಕೇಸ್ ಇತ್ಯರ್ಥ ಮಾಡುತ್ತೇವೆ ಎಂದು ಹೇಳಿದರು.

ಇನ್ನು ಶಾಸಕ ಸುನಿಲ್ ಕುಮಾರ್ ವಿರುದ್ಧ ಕಿಡಿಕಾರಿದ ಸಿಎಂ, ಅವರಿಗೆ ಇತಿಹಾಸ, ಸಂವಿಧಾನ ಗೊತ್ತಿಲ್ಲ. ವಿಕ್ರಂಗೌಡ ಎನ್‌ಕೌಂಟರ್ ಬಗ್ಗೆ ಸಿಐಡಿ ತನಿಖೆ ಆಗ್ತಿದೆ. ವಿರೋಧ ಪಕ್ಷದವರು ಟೀಕೆ ಮಾಡಲಿ. ನಮ್ಮ ಕೆಲಸ ನಾವು ರಾಜ್ಯಕ್ಕೆ ಮಾಡ್ತೀವಿ ಎಂದು ಸಿಎಂ ತಿರುಗೇಟು ನೀಡಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page