ಮಹಿಳಾ ಮೋರ್ಚಾ ದಿಂದ ಮಹಿಳೆಯರ ಆರೋಗ್ಯ ತಪಾಸಣಾ ಶಿಬಿರ ಹಾಗೂ
ಯುವ ಮೋರ್ಚಾದಿಂದ ರಕ್ತದಾನ ಶಿಬಿರ ಕಾರ್ಯಕ್ರಮ

ಕಾರ್ಕಳ ಸೆ 16: ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ 74ನೇ ಜನ್ಮದಿನವು ನಾಳೆ ಸೆ. 17 ರಂದು ನಡೆಯಲಿದ್ದು, ಇದರ ಅಂಗವಾಗಿ ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಭಾರತೀಯ ಜನತಾ ಪಾರ್ಟಿಯು ದೇಶದಾದ್ಯಂತ ಸೇವಾ ಪಾಕ್ಷಿಕ ಯೋಜನೆಯಡಿ ವಿವಿಧ ಸೇವಾ ಕಾರ್ಯಗಳು ನಡೆಯುತ್ತಿವೆ.
ಭಾರತೀಯ ಜನತಾ ಪಾರ್ಟಿ ಕಾರ್ಕಳ, ಮಾಹೆ ಸಂಸ್ಥೆ, ಮಣಿಪಾಲ ಹಾಗೂ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ ಇವರ ಸಹಯೋಗದೊಂದಿಗೆ, ನಾಳೆ ಬೆಳಿಗ್ಗೆ 9 ಗಂಟೆಯಿಂದ ಕಾರ್ಕಳ ಬಿಜೆಪಿ ಯುವ ಮೋರ್ಚಾದಿಂದ ʼರಕ್ತದಾನ ಶಿಬಿರʼ ಹಾಗೂ ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ʼಆರೋಗ್ಯ ತಪಾಸಣೆ ಹಾಗೂ ಕ್ಯಾನ್ಸರ್ ಕುರಿತು ಜಾಗೃತಿ ಹಾಗೂ ಮಾಹಿತಿ ಶಿಬಿರʼ ವನ್ನು ʼವಿಕಾಸʼ ಜನಸೇವಾ ಕಛೇರಿ ಕಾರ್ಕಳ ಇಲ್ಲಿ ಆಯೋಜಿಸಲಾಗಿದೆ.
ಈ ಪ್ರಯುಕ್ತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಈ ಕಾರ್ಯಕ್ರಮದ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬೇಕು, ಪ್ರಧಾನಿಗಳಾದ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿ, ವಿವಿಧ ಸೇವಾ ಯೋಜನೆಯಲ್ಲಿ ಸಹಭಾಗಿಗಳಾಗಬೇಕಾಗಿ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













