
ನಾಡಹಬ್ಬ ದಸರಾ ಉದ್ಘಾಟಕರಾಗಿ ಭಾನು ಮುಷ್ತಾಕ್ ಆಯ್ಕೆಯಾಗಿದ್ದು, ಸರಕಾರದ ಕ್ರಮವನ್ನು ಪ್ರಶ್ನಿಸಿ, ಮಾಜಿ ಸಂಸದ ಪ್ರತಾಪ್ ಸಿಂಹ ,ಗಿರೀಶ್ ಕುಮಾರ್ ಮತ್ತು ಗೌರವ್ ಎಂಬವರಿಂದ ಹೈಕೋರ್ಟಿಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು ಇಂದು ಅರ್ಜಿಗಳ ವಿಚಾರಣೆ ನಡೆಯಲಿದೆ.
ಸರಕಾರದ ಕ್ರಮದಿಂದಾಗಿ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ. ದಸರಾ ಉದ್ಘಾಟನೆಯ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮತ್ತು ವೇದ ,ಮಂತ್ರ ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆ ಮಾಡುವ ಸಂಪ್ರದಾಯವಿದ್ದು, ರಾಜ್ಯ ಸರಕಾರ ಏಕ ಪಕ್ಷಿಯವಾಗಿ ಆಯ್ಕೆ ಪ್ರಕ್ರಿಯೆ ನಡೆಸಿದೆ. ಆದ್ದರಿಂದ ಭಾನು ಮುಷ್ತಾಕ್ ರಿಗೆ ನೀಡಿದ ಆಹ್ವಾನ ಹಿಂಪಡೆಯಲು ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಇಂದು ಅರ್ಜಿಗಳ ವಿಚಾರಣೆ ನಡೆಯಲಿದ್ದು, ದಸರಾ ಉದ್ಘಾಟನೆ ವಿವಾದ ಅಂತ್ಯಗೊಳ್ಳಲಿದೆ.













