
ಬೆಂಗಳೂರು: ಕಂದಾಯ ಸಚಿವ ಕೃಷ್ಣಬೈರೇಗೌಡ ಶುಕ್ರವಾರ ವಿಕಾಸಸೌಧದಲ್ಲಿ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ್ದು ಈ ವೇಳೆ ರಾಜ್ಯದಲ್ಲಿ ಅನಧಿಕೃತ ಬಡಾವಣೆಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹೀಗಾಗಿ ಇನ್ನು ಮುಂದೆ ನಿಯಮ ಮೀರಿ ಅನಧಿಕೃತ ಬಡಾವಣೆ ನಿರ್ಮಿಸಿದರೆ ಸರ್ಕಾರದಿಂದ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ವಸತಿ ಬಡಾವಣೆ ನಿರ್ಮಿಸಬೇಕಾದರೆ ಜಿಲ್ಲಾಧಿಕಾರಿಗಳಿಂದ ಭೂ ಬಳಕೆ ಪರಿವರ್ತನೆ ಮಾಡಿಸಿ ನಕ್ಷೆ ಮಂಜೂರಾತಿ ಪಡೆದು ಅದರಂತೆಯೇ ನಿರ್ಮಾಣ ಮಾಡಬೇಕು. ಬಳಿಕವೇ ನಿವೇಶನಗಳನ್ನು ಮಾರಾಟ ಮಾಡಲು ಅನುಮತಿ ನೀಡಬೇಕು. ಅಂತಹ ನಿವೇಶನಗಳಿಗೆ ಮಾತ್ರ ಇನ್ನು ಮುಂದೆ ಇ-ಖಾತಾ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.





