30.9 C
Udupi
Wednesday, February 4, 2026
spot_img
spot_img
HomeBlogನೇಮಕಾತಿಗಳಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ : ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ ರಾಜ್ಯ...

ನೇಮಕಾತಿಗಳಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ : ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರವು ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ದಸರಾ ಗಿಫ್ಟ್ ನೀಡಿದ್ದು ಅದೇನೆಂದರೆ ರಾಜ್ಯ ಸರ್ಕಾರದ ಸಿವಿಲ್ ನೇರ ನೇಮಕಾತಿಗಳಲ್ಲಿ 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಮಹತ್ವದ ಆದೇಶ ಹೊರಡಿಸಿದೆ. ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೂ ಒಂದು ಬಾರಿಗೆ ಅನ್ವಯವಾಗುವಂತೆ 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಆದೇಶ ಹೊರಡಿಸಲಾಗಿದೆ.

ಇತ್ತೀಚೆಗೆ ಧಾರವಾಡದಲ್ಲಿ ಯುವ ಸಮೂಹ 5 ವರ್ಷಗಳ ವಯೋಮಿತಿ ಸಡಿಲಿಕೆ ಹಾಗೂ ಪಿಎಸ್‌ಐ/ಕಾನ್ಸಟೇಬಲ್ ಹುದ್ದೆಗಳಿಗೆ ನೇಮಕಾತಿ ಆದೇಶಕ್ಕೆ ಆಗ್ರಹಿಸಿ ಜೆನ್ ಜಿ ಮಾದರಿಯಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದರು. ಇದರ ಮಧ್ಯೆ ಇದೇ ತಿಂಗಳ 6ರಂದು ರಾಜ್ಯ ಸರ್ಕಾರ ಸಿವಿಲ್ ಹುದ್ದೆಗಳ ನೇರ ನೇಮಕಾತಿಗಳಿಗೆ 2 ವರ್ಷ ಸಡಿಲಿಕೆ ಮಾಡಿ ಆದೇಶಿಸಿತ್ತು.

ಈಗ 5 ವರ್ಷ ವಯೋಮಿತಿ ಸಡಿಲಿಕೆ ಮಾಡುವಂತೆ ಜನಪ್ರತಿನಿಧಿಗಳು, ಸಂಘಟನೆಗಳು ಸರ್ಕಾರದ ಮೇಲೆ ಒತ್ತಡ ಹಾಕಿದ ಪರಿಣಾಮ ಸರ್ಕಾರ ಇದೀಗ 3 ವರ್ಷಗಳ ಸಡಿಲಿಕೆ ಮಾಡಿದೆ. ಈ ವಯೋಮಿತಿ ಸಡಿಲಿಕೆ 2027 ರ ಡಿಸೆಂಬರ್ 31ರೊಳಗೆ ಸರ್ಕಾರ ಹೊರಡಿಸುವ ಎಲ್ಲ ನೇರ ನೇಮಕಾತಿಗಳಿಗೂ ಒಂದು ಬಾರಿ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೂ ಅನ್ವಯಿಸಲಿದೆ.

  • ಸಾಮಾನ್ಯ ವರ್ಗ – 35 ವರ್ಷದಿಂದ 38 ವರ್ಷ
  • ಒಬಿಸಿ – 38 ವರ್ಷದಿಂದ 41 ವರ್ಷ
  • ಎಸ್‌ಸಿ/ಎಸ್‌ಟಿ/ಪ್ರವರ್ಗ-1 – 40 ವರ್ಷದಿಂದ 43 ವರ್ಷ
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page