31.3 C
Udupi
Saturday, March 15, 2025
spot_img
spot_img
HomeBlogಪಂದ್ಯದ ಪ್ರತಿ ಕ್ಷಣವನ್ನೂ ಆನಂದಿಸಿದ್ದೇನೆ –ಅಭೂತಪೂರ್ವ ಗೆಲುವು ಸಾಧಿಸಿದ ಆರ್‌ಸಿಬಿ ತಂಡವನ್ನು ಕೊಂಡಾಡಿದ ಸಿಎಂ ಸಿದ್ದರಾಮಯ್ಯ

ಪಂದ್ಯದ ಪ್ರತಿ ಕ್ಷಣವನ್ನೂ ಆನಂದಿಸಿದ್ದೇನೆ –ಅಭೂತಪೂರ್ವ ಗೆಲುವು ಸಾಧಿಸಿದ ಆರ್‌ಸಿಬಿ ತಂಡವನ್ನು ಕೊಂಡಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಎಸ್‌ಕೆ ವಿರುದ್ಧ ನಡೆದ ನಾಕೌಟ್‌ ಕದನದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ RCB ತಂಡವನ್ನು ಮನಸಾರೆ ಕೊಂಡಾಡಿದ್ದಾರೆ.

ರಾಜಕೀಯ ಒತ್ತಡದ ನಡುವೆಯೂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಚಿವರೊಂದಿಗೆ ಕುಳಿತು ಪೂರ್ಣ ಪಂದ್ಯ ವೀಕ್ಷಣೆ ಮಾಡಿದ ಸಿಎಂ ಈ ಕುರಿತು ಎಕ್ಸ್‌ ಖಾತೆಯಲ್ಲಿ ‘ಸತತ 6ನೇ ಗೆಲುವಿನೊಂದಿಗೆ ನಮ್ಮ ಆರ್‌ಸಿಬಿ ಪ್ಲೇಆಫ್ ಸುತ್ತಿಗೆ ಲಗ್ಗೆಯಿಟ್ಟಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಜರಿದ್ದು ಪಂದ್ಯದ ಪ್ರತಿ ಕ್ಷಣವನ್ನು ಆನಂದಿಸಿದೆ. ನಮ್ಮ ಆರ್‌ಸಿಬಿ ತಂಡದ ಐತಿಹಾಸಿಕ ಗೆಲುವಿನ ಕ್ಷಣಗಳಿಗೆ ಸಾಕ್ಷಿಯಾದುದ್ದು ಖುಷಿಕೊಟ್ಟಿದೆ. ಇದು ಆರ್.ಸಿ.ಬಿ ಯ ಹೊಸ ಅಧ್ಯಾಯ’ ಎಂದು ಬರೆದು ಹಂಚಿಕೊಂಡಿದ್ದಾರೆ.

ಆರ್ಸಿಬಿ ಗೆಲುವಿಗೆ ಬೆಂಗಳೂರಿನಲ್ಲಂತೂ ಬೀದಿ ಬೀದಿಗಳಲ್ಲಿ ಪಟಾಕಿ ಸಿಡಿಸಿ, ತಡರಾತ್ರಿವರೆಗೂ ಕುಣಿದು ಕುಪ್ಪಳಿಸಿದ್ದಾರೆ. ಆರ್‌ಸಿಬಿ ಕಪ್‌ ಗೆಲ್ಲದಿದ್ದರೂ ಪರವಾಗಿಲ್ಲ, ಚೆನ್ನೈ ವಿರುದ್ಧ ಗೆದ್ದಿದ್ದೇ ನಮಗೆ ಖುಷಿ ಕೊಟ್ಟಿದೆ ಎಂದು ಕೂಗಿ ಹೇಳಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page