
ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿಯ ಬಳಿ ಪತ್ನಿ ಜೊತೆ ಅಪಾಯಕಾರಿ ಸ್ಥಳದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ 60 ಅಡಿ ಆಳದ ಪ್ರಪಾತಕ್ಕೆ ಬಿದ್ದು ಶಿಕ್ಷಕ ಸಾವನ್ನಪ್ಪಿದ ದುರ್ಘಟನೆ ಸಂಭವಿಸಿದೆ.
ತರೀಕೆರೆ ತಾಲೂಕಿನ ಲಕ್ಷ್ಮೀಸಾಗರ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಸಂತೋಷ್ (40) ಎಂಬವರು ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿಗೆ ಪತ್ನಿ ಜೊತೆ ಬಂದಿದ್ದರು. ಈ ವೇಳೆ ರಸ್ತೆ ಬದಿ ಪತ್ನಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳುವಾಗ ಆಯತಪ್ಪಿ ಪ್ರಪಾತಕ್ಕೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಅವರ ತಲೆಗೆ ಬಲವಾದ ಗಾಯವಾಗಿ, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಗ್ನಿಶಾಮಕದಳದ ಸಿಬ್ಬಂದಿ ಪ್ರಪಾತದಿಂದ ಮೃತದೇಹವನ್ನು ಹೊರತೆಗೆದಿದ್ದಾರೆ.









