
ಬೆಂಗಳೂರು: ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಮುಖ್ಯ ಅಧೀಕ್ಷಕ ಸುರೇಶ್, ಜೈಲ್ ಅಧೀಕ್ಷಕ ಮ್ಯಾಗೇರಿ, ಸಹಾಯಕ ಅಧೀಕ್ಷಕ ಅಶೋಕ್ ಭಜಂತ್ರಿ ಅವರನ್ನು ಅಮಾನತುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದ್ದು ಇನ್ನು ಮುಂದೆ ಈ ರೀತಿ ಪ್ರಕರಣ ಮರುಕಳಿಸದೇ ಇರಲು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ, ಜಿಲ್ಲಾಧಿಕಾರಿಗಳು, ಎಸ್‌ಪಿ ಅವರನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ.

































