
ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನವೆಂಬರ್ 21ರಂದು ನಡೆದ 2024-25ನೇ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳ ಉಡುಪಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸಹ ಪಠ್ಯೇತರ ಸ್ಪರ್ಧೆಗಳಲ್ಲಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ .
ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಕಾರ್ತಿಕ್ ,ದ್ವಿತೀಯ ಪಿಯುಸಿ ಹಾಗೂ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಸುಕನ್ಯಾಶ್ರೀ ಪ್ರಥಮ ಸ್ಥಾನ ಗಳಿಸಿದ್ದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರು , ಸದಸ್ಯರು , ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ .



















