
ನವದೆಹಲಿ/ಇಸ್ಲಾಮಾಬಾದ್: ಭಾರತವು ಪಾಕಿಸ್ತಾನದ ಹಲವು ವಾಯು ನೆಲೆಗಳ ಮೇಲೆ ದಾಳಿ ನಡೆಸಿದ್ದು ಈ ಭೀಕರ ಧಾಳಿಗೆ ಪಾಕಿಸ್ತಾನ ಸರ್ಕಾರವು ತತ್ತರಿಸಿ ಹೋಗಿದೆ.
ಈ ಕುರಿತು ಅಧಿಕೃತವಾಗಿ ಮಾಹಿತಿ ನೀಡಿದ ಪಾಕ್ ಸೇನೆಯು ರಾಜಧಾನಿ ಇಸ್ಲಾಮಾಬಾದ್ ದೇಶದ ಮಿಲಿಟರಿ ಪ್ರಧಾನ ಕಚೇರಿಗೆ ಹೊಂದಿಕೊಂಡಿರುವ ರಾವಲ್ಪಿಂಡಿಯಲ್ಲಿರುವ ನೂರ್ ಖಾನ್ ವಾಯುನೆಲೆ ಸೇರಿದಂತೆ ಮೂರು ವಾಯುನೆಲೆಯ ಮೇಲೆ ಭಾರತ ದಾಳಿ ಮಾಡಿದೆ.
ಇಸ್ಲಾಮಾಬಾದ್‌ನಿಂದ 10 ಕಿಲೋಮೀಟರ್‌ಗಿಂತಲೂ ಕಡಿಮೆ ದೂರದಲ್ಲಿರುವ ವಾಯು ನೆಲೆಯ ಮೇಲೆಯೇ ಭಾರತ ದಾಳಿ ನಡೆಸಿದ್ದು ಭೀಕರ ದಾಳಿಗೆ ಅಲ್ಲೋಲ ಕಲ್ಲೋಲವಾಗಿದ್ದು ಪಾಕ್ ಸರ್ಕಾರವು ಎಲ್ಲಾ ನಾಗರಿಕ ಮತ್ತು ವಾಣಿಜ್ಯ ವಿಮಾನ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ.



















