
ಬೆಂಗಳೂರು: ಸರಕಾರವು ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ ಸ್ಪೆಕ್ಟರ್ ಹುದ್ದೆಗಳಿಗೆ ಸೇರಿದಂತೆ, ವಿವಿಧ ಇಲಾಖೆ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಭಾವ್ಯ ಪರೀಕ್ಷೆ ದಿನಾಂಕವನ್ನು ಪ್ರಕಟಿಸಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಮಾಹಿತಿ ನೀಡಿದ್ದಾರೆ.
ಸೆಪ್ಟೆಂಬರ್ 22ರಂದು ಪೋಲಿಸ್ ಇಲಾಖೆಯ 402 ಪಿ ಎಸ್ ಐ ಹುದ್ದೆಗಳಿಗೆ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಹಾಯಕ ಲೆಕ್ಕಿಗ, ಸಹಾಯಕ ಸಂಚಾರ ನಿರೀಕ್ಷಕ, ಕ.ರಾ.ಸಾ.ಪೇದೆ, ಕುಶಲಕರ್ಮಿ, ತಾಂತ್ರಿಕ ಸಹಾಯಕ 36 ಹುದ್ದೆಗಳಿಗೆ ಜುಲೈ 12 ರಿಂದ 14ರವರೆಗೆ ಪರೀಕ್ಷೆ ನಿಗದಿಯಾಗಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ 2500 ಹುದ್ದೆಗಳಿಗೆ ಸೆಪ್ಟೆಂಬರ್ 1ರಂದು ಪರೀಕ್ಷಾ ವೇಳಾಪಟ್ಟಿ ನಿಗದಿಯಾಗಿದ್ದು ಕಂದಾಯ ಇಲಾಖೆಯ 1,000 ಹುದ್ದೆಗಳಿಗೆ ಅಕ್ಟೋಬರ್ 27ರಂದು ಪರೀಕ್ಷೆ ನಿಗದಿಯಾಗಿದೆ.