
ಬೆಂಗಳೂರು: ಗೃಹ ಸಚಿವ ಪರಮೇಶ್ವರ್ ಬೆಂಗಳೂರಿನಲ್ಲಿ ಮಾತನಾಡಿ ಪೊಲೀಸ್ ಹುದ್ದೆಗಳ ನೇಮಕಾತಿಗಳಿಗೆ ಪ್ರತ್ಯೇಕ ಶಾಶ್ವತ ವಯೋಮಿತಿ ಸಡಿಲಿಕೆ ನಿಯಮ ಪ್ರಕಟಿಸುವುದಾಗಿ ಹೇಳಿದ್ದಾರೆ.
ಸರ್ಕಾರಿ ಹುದ್ದೆಗೆ ಅರ್ಜಿ ಹಾಕುವ ಎಲ್ಲ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಮಾಡಿ ಸಿಎಂ ಆದೇಶ ಹೊರಡಿಸಿದ್ದಾರೆ. ಅದು ಒಂದು ಸಲಕ್ಕೆ ಮಾತ್ರ ಅನ್ವಯವಾಗುವಂತೆ 2027ರವರೆಗೆ ವಯೋಮಿತಿ ಸಡಿಲಿಸಿದ್ದೇವೆ. ಆದರೆ ನಮ್ಮ ಪೊಲೀಸ್ ಇಲಾಖೆಯಲ್ಲಿ ಕಾನ್‌ಸ್ಟೇಬಲ್, ಪಿಎಸ್‌ಐ, ಎಸ್ಐ ಹುದ್ದೆಗಳಿಗೆ ಶಾಶ್ವತವಾಗಿ ವಯೋಮಿತಿ ಸಡಿಲಿಕೆ ಕೊಡಲು ಮುಂದಾಗಿದ್ದೇವೆ ಎಂದು ಮಾಹಿತಿ ನೀಡಿದರು.



















