
ಬೆಂಗಳೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಭಾನುವಾರದಂದು ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ ಜೆಡಿಎಸ್ ಪಕ್ಷದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ತನಿಖೆ ನಡೆಸಿದ ಎಸ್ಐಟಿ ತಂಡಕ್ಕೆ ಅಭಿನಂದನೆ ಸಲ್ಲಿಸಿ ಮುಖ್ಯಮಂತ್ರಿ ಪದಕ ಪ್ರಧಾನಿಸುತ್ತೇವೆ. ಜೊತೆಗೆ ರಾಷ್ಟ್ರಪತಿ ಪದಕಕ್ಕೂ ಶಿಫಾರಸು ಮಾಡುತ್ತೇವೆ ಎಂದು ಹೇಳಿದ್ದಾರೆ.
ಈ ಪ್ರಕರಣದಲ್ಲಿ ನಮ್ಮ ಪೊಲೀಸರು ಅಚ್ಚುಕಟ್ಟಾಗಿ ತನಿಖೆ ಮಾಡಿದ್ದಾರೆ. ಹೀಗಾಗಿ ಮೊದಲು ಎಸ್ಐಟಿಗೆ ಅಭಿನಂದನೆ ಹೇಳುತ್ತೇನೆ. ಶೀಘ್ರವಾಗಿ ತನಿಖೆ ಮುಗಿಸಿರುವ ಹಿನ್ನೆಲೆ ತನಿಖಾ ತಂಡದವರಿಗೆ ಮುಖ್ಯಮಂತ್ರಿ ಪದಕದ ಜೊತೆಗೆ ರಾಷ್ಟ್ರಪತಿ ಪದಕಕ್ಕೂ ಶಿಫಾರಸು ಮಾಡುತ್ತೇವೆ ಎಂದು ಹೇಳಿದರು.