
ಕಾರ್ಕಳ: ಫೆ. 7ರಂದು ಟಪ್ಪಾಲು ಕಟ್ಟೆ ಶ್ರೀ ದುರ್ಗಾದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಮೀಪದ ಸಮಾಜ ಮಂದಿರದಲ್ಲಿ ಕುಕ್ಕುಂದೂರು ಫ್ರೆಂಡ್ಸ್ (ರಿ.) ಕುಕ್ಕಂದೂರು–ಮುಂಬೈ ಸಂಘಟನೆಯ 17ನೇ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನಡೆಯಲಿದ್ದು, 9.30ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಆರಂಭವಾಗಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ.
ರಾತ್ರಿ 8 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಕುಕ್ಕಂದೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಶಂಕರನಾರಾಯಣ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮೂಡುಬಿದಿರೆ ಶ್ರೀ ದಿಗಂಬರ ಜೈನ್ ಮಠದ ಡಾ. ಸ್ವಸ್ತಿ ಶ್ರೀ ಭಟ್ಟಾರಲ ಚಾರುಕೀರ್ತಿ ಪಂಡಿತಾಚಾರ್ಯ ಪಟ್ಟಾಚಾರ್ಯವರ ಮಹಾಸ್ವಾಮೀಜಿ ದಿವ್ಯ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಮುಂಬೈ ಉದ್ಯಮಿ ಮಹೇಶ್ ಶೆಟ್ಟಿ ಕುಡುಪಲಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಪ್ರದೀಪ್ ಆರ್., ಕುಕ್ಕಂದೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ, ಕುಕ್ಕಂದೂರು ಶ್ರೀ ದುರ್ಗಾದೇವಿ ಅನುಧಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಂಚಾಲಕ ರಾಜೇಂದ್ರ ಮುದ್ಯ, ಕಾರ್ಕಳ ಮೀರಾ ಕಾಮತ್ ಮೆಮೋರಿಯಲ್ ಫಂಡ್ ಸಂಸ್ಥಾಪಕ ಕಮಲಾಕ್ಷ ಕಾಮತ್, ಶಾಲಾ ಮುಖ್ಯ ಶಿಕ್ಷಕಿ ಸುಜಾತಾ ಎನ್. ರಾಜ್, ಕುಕ್ಕಂದೂರು ಫ್ರೆಂಡ್ಸ್ ಕುಕ್ಕಂದೂರು–ಮುಂಬೈ ಗೌರವಾಧ್ಯಕ್ಷ ತ್ರಿವಿಕ್ರಮ ಕಿಣಿ ಹಾಗೂ ಉದ್ಯಮಿ ಕಮಲಾಕ್ಷ ನಾಯಕ್ ಭಾಗವಹಿಸಲಿದ್ದಾರೆ.
ಸಂಜೆ 6.30ರಿಂದ ಭಜನಾ ಕಾರ್ಯಕ್ರಮದೊಂದಿಗೆ ಶಾಲಾ ವಿದ್ಯಾರ್ಥಿಗಳು ಹಾಗೂ ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನಂತರ ಸಂಘದ ಸದಸ್ಯರು ಮತ್ತು ಅತಿಥಿ ಕಲಾವಿದರಿಂದ ಪ್ರಸನ್ನ ಕುಕ್ಕಂದೂರು ರಚನೆಯ ‘ಮದಿಮೆ ದಾಯೆ..?’ ಎಂಬ ತುಳು ಹಾಸ್ಯ ನಾಟಕ ಪ್ರದರ್ಶನಗೊಳ್ಳಲಿದೆ. ಇದಾದ ನಂತರ, ಚಿತ್ರನಟ ಹಾಗೂ ‘ಬಲೆ ತೆಲಿಪಾಲೆ’ ಖ್ಯಾತಿಯ ಉಮೇಶ್ ಮಿಜಾರ್ ಅವರು ರಚಿಸಿ ನಿರ್ದೇಶಿಸಿರುವ ನಮ್ಮ ಕಲಾವಿದೆರ್ ಬೆದ್ರ ತಂಡದಿಂದ ತುಳು ಹಾಸ್ಯ ನಾಟಕ ‘ವೈರಲ್ ವೈಶಾಲಿ’ ನಡೆಯಲಿದೆ.



















