
ಉಡುಪಿ: ಆಗಸ್ಟ್ 5 ರಂದು ಬೆಳಿಗ್ಗೆ ಶಿರ್ವ ದಿಂದ ಉಡುಪಿಗೆ ಬರುತ್ತಿದ್ದ ನವೀನ್ ಬಸ್ನಲ್ಲಿ ಯುವತಿಯೊಬ್ಬಳು ಅಸ್ವಸ್ಥಗೊಂಡಿದ್ದು ಹೀಗಾಗಿ ಬಸ್ ಚಾಲಕ ಹಾಗೂ ನಿರ್ವಾಹಕ ಬಸ್ ಅನ್ನು ಆಸ್ಪತ್ರೆಗೆ ಕೊಂಡೊಯ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ಈ ಯುವತಿ ಉಡುಪಿಯ ಹಳೆ ತಾಲ್ಲೂಕು ಕಚೇರಿಗೆ ಬರುತ್ತಿದ್ದಂತೆ ಬಸ್ಸಿನಲ್ಲೇ ವಾಂತಿ ಮಾಡಿ ಅಸ್ವಸ್ಥಗೊಂಡಿದ್ದಾಳೆ. ಕೂಡಲೇ ಎಚ್ಚೆತ್ತ ನವೀನ್ ಬಸ್ ನ ಚಾಲಕ ಶಶಿಕಾಂತ್, ನಿರ್ವಾಹಕ ಸಲೀಂ ಬಸ್ಸನ್ನು ತಕ್ಷಣವೇ ಟಿಎಂಎ ಪೈ ಆಸ್ಪತ್ರೆಗೆ ಕೊಂಡೊಯ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಜೊತೆಗೆ ಬಾಲಕಿಯ ಮನೆಯವರಿಗೆ ಮಾಹಿತಿ ನೀಡಿ ಮನೆಯವರು ಬರುವ ತನಕ ಯುವತಿಯ ಚಿಕಿತ್ಸೆಗೆ ಬಸ್ ಸಿಬಂದಿ ಸಹಕರಿಸಿದ್ದಾರೆ.













