ಪ್ರಧಾನಿ ಜನ್ಮದಿನದ ಪ್ರಯುಕ್ತ”ಕ್ಯಾನ್ಸರ್ ಕುರಿತು ಮಾಹಿತಿ ಹಾಗೂ ತಪಾಸಣಾ ಶಿಬಿರ”

ಬಿಜೆಪಿ ಮಹಿಳಾ ಮೋರ್ಚಾ ಕಾರ್ಕಳ ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಮಾಹೆ ಸಂಸ್ಥೆ, ಮಣಿಪಾಲ ಇದರ ಸಹಯೋಗದೊಂದಿಗೆ ಬಿಜೆಪಿ ಮಹಿಳಾ ಕಾರ್ಯಕರ್ತರಿಗೆ ಕ್ಯಾನ್ಸರ್ ಕುರಿತು ಮಾಹಿತಿ ಹಾಗೂ ತಪಾಸಣಾ ಶಿಬಿರ ನಡೆಯಲಿದೆ.
ಸೆಪ್ಟೆಂಬರ್ 17 ಮಂಗಳವಾರ ಬೆಳಿಗ್ಗೆ 9 ರಿಂದ ವಿಕಾಸ ಜನಸೇವಾ ಕಚೇರಿ ಇಲ್ಲಿ , ಪ್ರಧಾನಿಯವರ ಜನ್ಮದಿನದ ಪ್ರಯುಕ್ತ ಕ್ಯಾನ್ಸರ್ ಕುರಿತು ಮಾಹಿತಿ ಹಾಗೂ ತಪಾಸಣಾ ಶಿಬಿರ ನಡೆಯಲಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಪ್ರಕಟಣೆಯಲ್ಲಿ ತಿಳಿಸಿದೆ.













