28 C
Udupi
Saturday, April 25, 2026
spot_img
spot_img
HomeBlogಬಿಜೆಪಿ ಶಾಸಕ ಮುನಿರತ್ನಗೆ ಮತ್ತೆ ನ್ಯಾಯಾಲಯ ಬಂಧನ ವಿಧಿಸಿ ಆದೇಶ ಹೊರಡಿಸಿದ ಕೋರ್ಟ್

ಬಿಜೆಪಿ ಶಾಸಕ ಮುನಿರತ್ನಗೆ ಮತ್ತೆ ನ್ಯಾಯಾಲಯ ಬಂಧನ ವಿಧಿಸಿ ಆದೇಶ ಹೊರಡಿಸಿದ ಕೋರ್ಟ್

ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದು ಇಂದು ಎಸ್ಐಟಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ , ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಇಂದು ಬಿಜೆಪಿ ಶಾಸಕ ಮುನಿರತ್ನ ಎಸ್ಐಟಿ ಕಸ್ಟಡಿ ಅಂತ್ಯವಾಗಿದ್ದು ಈ ಹಿನ್ನೆಲೆ ಎಸ್ಐಟಿ ಅಧಿಕಾರಿಗಳು ಮುನಿರತ್ನ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರು ಪಡಿಸಿದ್ದು, ಮತ್ತೆ ಮುನಿರತ್ನರನ್ನು ಕಸ್ಟಡಿಗೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ಕೋರ್ಟ್ಗೆ ಮನವಿ ಮಾಡಿದರು. ಆದ್ರೆ, ಕೋರ್ಟ್, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.

ಇನ್ನು ಮುನಿರತ್ನಗೆ ಮನೆ ಊಟಕ್ಕೆ ಅವಕಾಶ ಮಾಡಿಕೊಡುವಂತೆ ವಕೀಲರು ಕೋರ್ಟ್ಗೆ ಮನವಿ ಮಾಡಿದ್ದು ಈ ಬಗ್ಗೆ ಜೈಲು ಅಧಿಕಾರಿಗಳಿಗೆ ಮನವಿ ಮಾಡಲು ಕೋರ್ಟ್ ಸೂಚಿಸಿದೆ. ಒಂದು ವೇಳೆ ಅನುಮತಿ ನೀಡದಿದ್ದರೆ ಕೋರ್ಟ್ನಲ್ಲಿ ಅರ್ಜಿ ಹಾಕಿ ಎಂದು ಸೂಚಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page